ಬೆಂಗಳೂರು: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದರು.
Advertisement
ಈ ಕುರಿತು ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ವಿವರಿಸಿದರು.
Advertisement
Advertisement
1 ರಿಂದ 9ರ ವರೆಗೆ ಪಠ್ಯ ಕಡಿತವಿಲ್ಲ:
1 ರಿಂದ 9 ನೇ ತರಗತಿಗೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯಮಾಪನ ನಡೆಸುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯದ ಆಧಾರದಲ್ಲಿ ಸರಳ ಮೌಲ್ಯಮಾಪನ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಅವರು ಸ್ಪಷ್ಟಪಡಿಸಿದರು.