– ಹೋಟೆಲ್, ರೆಸ್ಟೋರೆಂಟ್ ಬಂದ್
– ಕೊರೊನಾ ಕಂಟ್ರೋಲ್‍ಗೆ ಬರದಿದ್ರೆ ಲಾಕ್‍ಡೌನ್ ಮುಂದುವರಿಕೆ
ಬೆಂಗಳೂರು: ಮಂಗಳವಾರ ರಾತ್ರಿ 9 ಗಂಟೆಯಿಂದ ಇಡೀ ಕರುನಾಡು ಸಂಪೂರ್ಣ ಸ್ತಬ್ಧವಾಗಲಿದೆ. ಲಾಕ್‍ಡೌನ್ ಹಿನ್ನೆಲೆ ಸಾರಿಗೆ ಬಸ್ ಗಳ ಸಂಚಾರ ಸಂಪೂರ್ಣವಾಗಿ ಬಂದ್ ಆಗಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಇದೇ ವೇಳೆ ಮೇ 10ರವರೆಗೆ ಕೊರೊನಾ ನಿಯಂತ್ರಣಕ್ಕೆ ಬರದಿದ್ರೆ ಲಾಕ್‍ಡೌನ್ ಮುಂದುವರಿಯಲಿದೆ ಎಂದು ಸಿಎಂ ತಿಳಿಸಿದರು.
ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10ರವರೆಗೆ ಮಾತ್ರ ಅಗತ್ಯವಸ್ತುಗಳ (ದಿನಸಿ, ತರಕಾರಿ, ಹಾಲು, ಹಣ್ಣು) ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಮದ್ಯದಂಗಡಿಗಳಿಗೆ ಸಮಯ ನಿಗದಿ ಪಡಿಸಲು ಸರ್ಕಾರ ಮುಂದಾಗಿದೆ. ಮಾರ್ಗಸೂಚಿ ಕೆಲವೇ ಗಂಟೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.
18ರಿಂದ 45 ವರ್ಷದೊಳಗಿನವರಿಗೆ ಸರ್ಕಾರದಿಂದ ಉಚಿತವಾಗಿ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು. ಬೆಳಗ್ಗೆ 6 ರಿಂದ 10 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅನುಮತಿ ನೀಡಲಾಗಿದೆ. ಕೃಷಿ, ಮೆಡಿಕಲ್ ಸೇರಿದಂತೆ ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.
ಇಂದು ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್, ಬಿಬಿಎಂಪಿ ಅಧಿಕಾರಿಗಳು ಲಾಕ್‍ಡೌನ್ ಅನಿವಾರ್ಯ. ಬೆಂಗಳೂರಿನಲ್ಲಿ ಲಾಕ್‍ಡೌನ್ ಆಗದಿದ್ರೆ ಬೆಂಗಳೂರಿನ ಸ್ಥಿತಿ ಕೈ ಮೀರಬಹದು. ತಜ್ಞರು ಸಹ ಲಾಕ್‍ಡೌನ್ ಮಾಡಲು ಸಲಹೆ ನೀಡಿದ್ದಾರೆ ಎಂದು ಸಿಎಂ ಗಮನಕ್ಕೆ ತಂದಿದ್ದರು.
ನಾಳೆ ರಾತ್ರಿಯಿಂದ ಕರ್ನಾಟಕದಲ್ಲಿ 14 ದಿನ ಲಾಕ್‍ಡೌನ್https://t.co/uFX6ETjdYG#CoronaVirus #COVID19 #Karnataka #KannadaNews #WeekendCurfew #BengaluruLock #KarnatakaLockdown #CMYediyurappa #Sudhakar
— PublicTV (@publictvnews) April 26, 2021