ಕೋಲಾರ: ಖತರ್ನಾಕ್ ಕಳ್ಳನೊರ್ವ ಬನಿಯನ್ ಧರಿಸಿ, ಮೈಗೆ ಎಣ್ಣೆ ಹಚ್ಚಿಕೊಂಡು ಬಂದು ಥೇಟ್ ಸಿನಿಮಾ ಸ್ಟೈಲ್‍ನಲ್ಲಿ ಎರಡು ಅಂಗಡಿಯಲ್ಲಿ ಕಳ್ಳತನ ಮಾಡಿದ್ದಾನೆ. ಕತರ್ನಾಕ್ ಕಳ್ಳನ ಕೈಚಳಕ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸಿಸಿ ಟಿವಿ ಆಧರಿಸಿ ಕಳ್ಳನ ಪತ್ತೆಗೆ ಕೋಲಾರ ನಗರ ಠಾಣೆ ಪೊಲೀಸರು ಮುಂದಾಗಿದ್ದಾರೆ.
ಹೌದು ಕೋಲಾರ ನಗರದ ಕಾಳಮ್ಮ ಗುಡಿ ರಸ್ತೆಯಲ್ಲಿ ಕಳ್ಳತನವಾಗಿದೆ. ಅಂಗಡಿಗಳ ಶಟರ್ ಮುರಿದು ಕಳ್ಳತನ ಮಾಡಿರುವ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಕಾಳಮ್ಮ ಗುಡಿಯಲ್ಲಿರುವ ಸೂರ್ಯ ಗಾಮೆರ್ಂಟ್ಸ್ ಹಾಗೂ ಮದೀನಾ ಹಾರ್ಡ್ ವೇರ್ ಶಾಪ್‍ನಲ್ಲಿ ಕಳವು ಮಾಡಿರುವ ಆರೋಪಿ, ಸೂರ್ಯ ಗಾಮೆರ್ಂಟ್ಸ್‍ನಲ್ಲಿ 17 ಸಾವಿರ ರೂಪಾಯಿ ನಗದು ಹಾಗೂ ಲಕ್ಷಾಂತರ ರೂಪಾಯಿ ಬೆಲೆಯ ಬಟ್ಟೆ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ.
ಮದೀನಾ ಹಾರ್ಡ್‍ವೇರ್ ಶಾಪ್‍ನಲ್ಲಿ ಟೂಲ್ ಕಿಟ್‍ಗಳನ್ನ ತೆಗೆದುಕೊಂಡು ಹೋಗಿದ್ದಾನೆ. ಈ ಎಲ್ಲಾ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಗಲ್‍ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.