ರಾಯ್‍ಪುರ: ಕರ್ನಾಟಕದ ಮೈಸೂರಿನಲ್ಲಿದ್ದ ಅತ್ಯಾಚಾರ ಆರೋಪಿಯನ್ನು ಬಂಧಿಸಿ ಕರೆತಂದ ಹಿನ್ನೆಲೆಯಲ್ಲಿ 60 ಮಂದಿ ಪೊಲೀಸರನ್ನು ಕ್ವಾರಂಟೈನ್ ಮಾಡಿರುವ ಘಟನೆ ಛತ್ತೀಸ್‍ಗಢದ ಬಿಲಾಸ್‍ಪುರಲ್ಲಿ ಬೆಳಕಿದೆ ಬಂದಿದೆ.
ಬಿಲಾಸ್‍ಪುರದ ಸಿವಿಲ್ ಲೈನ್ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಿ, ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಠಾಣೆಯ ಎಲ್ಲಾ ಪೊಲೀಸರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಬಿಸಾಲ್‍ಪುರ ಎಸ್‍ಪಿ ಪ್ರಶಾಂತ್ ಅರ್ಗವಾಲ್ ಮಾಹಿತಿ ನೀಡಿದ್ದಾರೆ.
Advertisement
Advertisement
28 ವರ್ಷದ ಅತ್ಯಾಚಾರ ಆರೋಪಿಯನ್ನು ಮೈಸೂರಿನಲ್ಲಿ ಸಿವಿಲ್ ಪೊಲೀಸ್ ಠಾಣೆಯ ನಾಲ್ವರ ಪೊಲೀಸರ ತಂಡ ಬಂಧಿಸಿ ಬಿಲಾಸ್‍ಪುರಕ್ಕೆ ಕರೆತಂದಿತ್ತು. ಕಳೆದ ತಿಂಗಳು ಮಹಿಳೆಯೊಬ್ಬರು ನೀಡಿದ ಅತ್ಯಾಚಾರ ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧಿತ ಆರೋಪಿ ಭಾಭಾ ಪರಮಾಣು ಸಂಶೋಧನಾ ಕೇಂದ್ರ ಮೈಸೂರಿನ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭಿಸಿತ್ತು ಎಂದು ಎಸ್‍ಪಿ ತಿಳಿಸಿದ್ದಾರೆ.
Advertisement
ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಹಿನ್ನೆಲೆಯಲ್ಲಿ ಜೈಲಿಗೆ ಕಳುಹಿಸಲಾಗಿತ್ತು. ಬಳಿಕ ಆತನಿಗೆ ಟೆಸ್ಟ್ ನಡೆಸಿದ ವೇಳೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಕೂಡಲೇ ಎಚ್ಚೆತ್ತು ಎಲ್ಲಾ ಪೊಲೀಸರ ಗಂಟಲು ಮಾದರಿಯನ್ನು ಪರೀಕ್ಷೆ ನಡೆಸಲು ಸೂಚಿಸಲಾಗಿತ್ತು. ಅಲ್ಲದೇ ಆರೋಪಿಯ ಪ್ರಾಥಮಿಕ ಸಂಪರ್ಕಿತರ ಪತ್ತೆ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಎಸ್‍ಪಿ ವಿವರಿಸಿದ್ದಾರೆ.