ಮೈಸೂರು: ಅರಮನೆ ನಗರಿ ಮೈಸೂರಿನಲ್ಲೂ ಕೊರೊನಾ ಮಹಾಮಾರಿಯ ಆರ್ಭಟ ಜೋರಾಗಿದೆ. ಪ್ರತಿದಿನ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಹೆಚ್ಚಾಗ್ತಾನೆ ಇದೆ. ಇದು ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಸೋಮವಾರದಿಂದ ಎಲ್ಲಾ ರೀತಿಯ ಜಾತ್ರೆ, ಸಭೆ, ಸಮಾರಂಭಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ.
ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಮೈಸೂರಿನಲ್ಲಿ ಕಂಟ್ರೋಲ್‍ನಲ್ಲಿದ್ದ ಕೊರೊನಾ, ಮತ್ತೆ ತನ್ನ ಕಬಂಧಬಾಹುವಿನೊಳಗೆ ಅರಮನೆ ನಗರಿಯನ್ನ ಬಂಧಿ ಮಾಡಿಕೊಳ್ತಿದೆ. ಮೊನ್ನೆ 74 ಪಾಸಿಟಿವ್ ಕೇಸ್ ದಾಖಲಾಗಿದ್ರೆ, ನಿನ್ನೆ 89ಕ್ಕೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಹೆಚ್ಚಾಗ್ತಿದ್ದು, ಜಿಲ್ಲಾಡಳಿತದ ಅತಂಕಕ್ಕೆ ಕಾರಣವಾಗಿದೆ.
ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಖಡಕ್ ರೂಲ್ಸ್‍ಗಳನ್ನು ಜಾರಿಗೆ ತರಲು ಮುಂದಾಗಿದೆ. ಸಮಾರಂಭ ಮತ್ತು ಜಾತ್ರೆಗಳಿಗೆ ನಿರ್ಬಂಧ ಹಾಕುವ ಚಿಂತನೆಯಲ್ಲಿದೆ. ಮೈಸೂರು ಪ್ರವಾಸಿ ತಾಣವಾಗಿರೋದ್ರಿಂದ ಜನಸಂದಣಿಯಾಗುವುದು ಸಾಮಾನ್ಯ. ಪ್ರವಾಸಿಗರು ಕೊರೊನಾ ನಿಯಮ ಗಾಳಿಗೆ ತೂರುತ್ತಿದ್ದಾರೆ. ಸಾರ್ವಜನಿಕ ಪ್ರದೇಶದಲ್ಲಿ ಸೇರುವ ಜನಸಂದಣಿಯಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರವಿಲ್ಲದಿರುವುದು. ಹೀಗಾಗಿ ಜಿಲ್ಲಾಡಳಿತ ಟಫ್‍ರೂಲ್ಸ್ ಜಾರಿಗೆ ಮುಂದಾಗಿದೆ.
ಕೊರೊನಾ ಕಂಟ್ರೋಲ್‍ಗೆ ಮೊದಲಿನಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದೆ. ಜ್ವರ, ಕೆಮ್ಮಿನಿಂದ ಬಳಲುತ್ತಿರುವ ಮಕ್ಕಳಿಗೆ ಶಾಲೆಗೆ ಬಾರದಂತೆ ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಜಾತ್ರೆ, ಹಬ್ಬಹರಿದಿನಗಳ ಮೇಲೂ ಕಣ್ಣಿಡಲಾಗಿದೆ.