ಮೈಸೂರು: ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಉಳಿದ ಸಿಬ್ಬಂದಿಯಲ್ಲಿ ಇದೀಗ ಆತಂಕ ಮನೆ ಮಾಡಿದೆ.
ಮೈಸೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಸಿಬ್ಬಂದಿಗೆ ಸೋಂಕು ದೃಢವಾಗಿದ್ದು, ಪಾಲಿಕೆ ಆರೋಗ್ಯ ವಿಭಾಗವನ್ನು ಸೀಲ್‍ಡೌನ್ ಮಾಡುವ ಸಾಧ್ಯತೆ ಇದೆ. ಈಗಾಗಲೇ ಔಷಧಿ ಸಿಂಪಡಣೆಗೆ ಪಾಲಿಕೆ ಸಿಬ್ಬಂದಿ ಮುಂದಾಗಿದ್ದು, ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ. ಸೋಂಕಿತ ಪಾಲಿಕೆ ಸಿಬ್ಬಂದಿಯ ನಿಕಟ ಸಂಪರ್ಕದಲ್ಲಿದ್ದವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಇದರಿಂದಾಗಿ ಪಾಲಿಕೆಯ ಮುಖ್ಯ ಆರೋಗ್ಯಾಧಿಕಾರಿ ಜಯಂತ್ ಸಹ ಹೋಮ್ ಕ್ವಾರಂಟೈನ್‍ಗೆ ಓಳಗಾಗಬೇಕಿದೆ.
ಮೈಸೂರಿನಲ್ಲಿ ಇಂದು ಕೊರೊನಾ ಅಟ್ಟಹಾಸ ಮೆರೆಯುವ ಸಾಧ್ಯತೆ ಇದ್ದು, 45ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಒಟ್ಟು 481 ಜನರಿಗೆ ಸೋಂಕು ತಗುಲಿದ್ದು, ಇದರಲ್ಲಿ 268 ಜನ ಗುಣಮುಖರಾಗಿ ಡಿಸ್ಚಾಜ್ ಆಗಿದ್ದಾರೆ. ಪ್ರಸ್ತುತ 205 ಆಕ್ಟಿವ್ ಪ್ರಕರಣಗಳಿದ್ದು, ಜಿಲ್ಲೆಯಲ್ಲಿ 8 ಜನ ಸಾವನ್ನಪ್ಪಿದ್ದಾರೆ.