Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Search

Archives

  • June 2026
  • May 2026
  • April 2026
  • March 2026
  • February 2026
  • January 2026
  • December 2025
  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021
  • September 2021
  • August 2021
  • July 2021
  • June 2021
  • May 2021
  • April 2021
  • March 2021
  • February 2021
  • January 2021
  • December 2020
  • November 2020
  • October 2020
  • September 2020
  • August 2020
  • July 2020
  • June 2020
  • May 2020
  • April 2020
  • March 2020
  • February 2020
  • January 2020
  • December 2019
  • November 2019
  • October 2019
  • September 2019
  • August 2019
  • July 2019
  • June 2019
  • May 2019
  • April 2019
  • March 2019
  • February 2019
  • January 2019
  • December 2018
  • November 2018
  • October 2018
  • September 2018
  • August 2018
  • July 2018
  • June 2018
  • May 2018
  • April 2018
  • March 2018
  • February 2018
  • January 2018
  • December 2017
  • November 2017
  • October 2017
  • September 2017
  • August 2017
  • July 2017
  • June 2017
  • May 2017
  • April 2017
  • March 2017
  • February 2017

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
  • ಟ್ರೆಂಡಿಂಗ್ ನ್ಯೂಸ್ ( Trending News )
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
© Public TV. Design Company Knowtable. All Rights Reserved.
Reading: ಮೊದಲ ದಿನದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸುಸೂತ್ರ: ಸುರೇಶ್ ಕುಮಾರ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
© Public TV. Design Company Knowtable. All Rights Reserved.

Home | Districts | Bengaluru City | ಮೊದಲ ದಿನದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸುಸೂತ್ರ: ಸುರೇಶ್ ಕುಮಾರ್

Bengaluru City

ಮೊದಲ ದಿನದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸುಸೂತ್ರ: ಸುರೇಶ್ ಕುಮಾರ್

Last updated: July 19, 2021 9:57 pm
By
Share
7 Min Read
SSLC EXAM 1
ಸಾಂದರ್ಭಿಕ ಚಿತ್ರ

ಬೆಂಗಳೂರು: ಮೊದಲ ದಿನ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಸುರಕ್ಷಿತ ವಾತಾವರಣದಲ್ಲಿ ಅತ್ಯಂತ ಉತ್ಸಾಹ ಮತ್ತು ಲವಲವಿಕೆಯಿಂದ ಪರೀಕ್ಷೆ ಬರೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

SURESHKUMAR 5

ಸೋಮವಾರ ಪರೀಕ್ಷೆಯ ನಂತರ ನಗರದ ಹಲವಾರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮೊದಲ ದಿನದ ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಅವರು, ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಪ್ರಶಾಂತ ವಾತಾವರಣದಲ್ಲಿ ನಡೆದವು. ಇಂದು ಮೂರು ಕೋರ್ ವಿಷಯಗಳ ಪರೀಕ್ಷೆಗಳು ನಡೆದವು. ಮಕ್ಕಳು ಹೊಸ ಮಾದರಿ ಪರೀಕ್ಷಾ ಪದ್ಧತಿಯನ್ನು ಸುಲಭವಾಗಿ ಅರ್ಥೈಸಿಕೊಂಡು ಒಎಂಆರ್ ಶೀಟ್‍ಗಳಲ್ಲಿ ಗುರುತು ಮಾಡಿದರು. ಕೊಠಡಿ ಮೇಲ್ವಿಚಾಕರ ಮಾ‌ರ್ಗದರ್ಶನದಂತೆ ಒಎಂಆರ್ ಶೀಟ್‍ಗೆ ಮೊದಲು ರಿಜಿಸ್ಟರ್ ನಂಬರ್ ದಾಖಲಿಸಿ ಕೆಳಗಡೆ ಸಹಿ ಮಾಡಿ ನಂತರ ಸರಿಯುತ್ತರಗಳನ್ನು ಗುರುತಿಸಲಾರಂಭಿಸಿದರು.

ಇಂದು ಬೆಂಗಳೂರಿನ ರಾಜಾಜಿನಗರದ ಫ್ಲಾರೆನ್ಸ್, ಕಡಾಂಬಿ, ಜಯನಗರದ ವಿಜಯಾ ಪ್ರೌಢಶಾಲೆ, ಬಿಇಎಸ್ ಪ್ರೌಢಶಾಲೆ, ಕಾರ್ಮಂಟ್ ಕಾನ್ವೆಂಟ್ ಶಾಲೆ, ಉತ್ತರಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆ, ಸಾರಕ್ಕಿ ಪಬ್ಲಿಕ್ ಶಾಲೆ ಕೋಟೆ ಪ್ರದೇಶದ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಎಲ್ಲ ಕಡೆಯೂ ಸಾಮಾಜಿಕ ಅಂತರ ಕಾಯ್ದುಕೊಂಡು ಮಕ್ಕಳು ಅತ್ಯಂತ ಶಿಸ್ತಿನಿಂದ ಪರೀಕ್ಷೆಗೆ ಹಾಜರಾಗಿದ್ದರು ಎಂದು ಅವರು ತಿಳಿಸಿದರು.

More Read

Abhijeet Dipke CJP
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ತಲಾ ಒಂದು ಕೋಟಿ ಪರಿಹಾರ ನೀಡಿ – ಮೋದಿಗೆ ʻಕಾಕ್ರೋಚ್‌ʼ ಪತ್ರ
Hulibeera
ಶಿವಾನಿ, ಮಾಳು ಕಂಠದಲ್ಲಿ ಹುಲಿಬೀರದ ಜಿಗ್ರಿ ದೋಸ್ತ್ ಹಾಡು
Chikkaballapura death
ಚಿನ್ನದ ಓಲೆಗಾಗಿ 80 ವರ್ಷದ ಅಜ್ಜಿಯ ಕೊಲೆ – ಕಿವಿ ಕತ್ತರಿಸಿ ಪರಾರಿಯಾದ ಕಳ್ಳ

SSLC EXAM 4

ಕೆಲವೆಡೆ ಶಾಸಕರು ಮತ್ತು ಸಚಿವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಖುದ್ದಾಗಿ ಭೇಟಿ ನೀಡಿದ್ದಾರೆ ಮಕ್ಕಳನ್ನು ಹುರಿದುಂಬಿಸಿದ್ದಾರೆ. ಹಲವಾರು ಕಡೆಗಳಲ್ಲಿ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಮಕ್ಕಳಿಗೆ ಉಪಹಾರ ವ್ಯವಸ್ಥೆ ಮಾಡಿದ್ದರು ಎಂದು ಹೇಳಿದ ಸಚಿವರು ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಜುಲೈ 26ಕ್ಕೆ ಬಿಎಸ್‍ವೈ ಮಹಾ ಭಾಷಣ? – ಸಿಎಂ ಬೆಂಬಲಿಗರು ಸೈಲೆಂಟ್

ಮಕ್ಕಳು ಸರತಿ ಸಾಲಿನಲ್ಲಿ ಸಾಮಾಜಿಕ ಅಂತರದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಬಂದರು. ನೇರವಾಗಿ ಪರೀಕ್ಷಾ ಕೇಂದ್ರದ ಆರೋಗ್ಯ ತಪಾಸಣಾ ಘಟಕಕ್ಕೆ ಭೇಟಿ ನೀಡಿ ಅಲ್ಲಿ ಜ್ವರ ಪರೀಕ್ಷೆಯ ನಂತರ ಪರೀಕ್ಷಾ ಕೇಂದ್ರದ ಮುಂದೆ ಹಾಕಲಾಗಿದ್ದ ಫಲಕದಲ್ಲಿ ತಮ್ಮ ಕೊಠಡಿ ಸಂಖ್ಯೆಯನ್ನು ನೋಡಿಕೊಂಡು ಪರೀಕ್ಷಾ ಕೊಠಡಿಗಳಿಗೆ ತೆರಳುವ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದಿಂದ ಹೋಗುವಾಗಲೂ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಾರೆ ಎಂದು ಸಚಿವರು ಹೇಳಿದರು.

SSLC EXAM 3

ಕಳೆದ ಬಾರಿಯ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದ ಮಕ್ಕಳಿಗಿಂತ ಹೆಚ್ಚಿನ ಸಂಖ್ಯೆಯ ಮಕ್ಕಳು ಹಾಜರಾಗಿದ್ದಾರೆ. ಮಕ್ಕಳ ಶೇ. ಹಾಜರಾತಿಯೂ ಸಹ ಈ ಬಾರಿ ಹೆಚ್ಚಾಗಿದೆ ಎಂದು ಅವರು ಹೇಳಿದರು.

ಗಣಿತ ವಿಷಯಕ್ಕೆ 8,52,191 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,49,199 ಅಭ್ಯರ್ಥಿಗಳು ಹಾಜರಾಗಿ 2992 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.64 ಹಾಜರಾತಿ ಇದೆ. ಕಳೆದ ವರ್ಷ ಇದು 98.30 ಇತ್ತು.

ವಿಜ್ಞಾನ ವಿಷಯಕ್ಕೆ 8,43,976 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,40,841 ಅಭ್ಯರ್ಥಿಗಳು ಹಾಜರಾಗಿ 3127 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.62 ಹಾಜರಾತಿ ಇದೆ. ಕಳೆದ ವರ್ಷ ಇದು 98.36 ಇತ್ತು.

ಸಮಾಜ ವಿಜ್ಞಾನ ವಿಷಯಕ್ಕೆ 8,24,689 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,21,823 ಅಭ್ಯರ್ಥಿಗಳು ಹಾಜರಾಗಿ 2867 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.65 ಹಾಜರಾತಿ ಇದೆ. ಕಳೆದ ವರ್ಷ ಇದು 98.43 ಇತ್ತು.

SSLC Exams 7

ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಹಾಜರಿದ್ದು ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಆರೋಗ್ಯ ಇಲಾಖಾ ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿದರು. ಎಲ್ಲ ಅಭ್ಯರ್ಥಿಗಳು ಮಾಸ್ಕ್‍ಗಳನ್ನು ಧರಿಸಿದ್ದರು. ಮಾಸ್ಕ್ ಧರಿಸದೇ ಬಂದ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಾಸ್ಕ್ ನೀಡಲಾಯಿತು ಎಂದು ಅವರು ವಿವರಿಸಿದರು.

ಒಟ್ಟಾರೆಯಾಗಿ ಪರೀಕ್ಷೆ ಯಾವುದೇ ವಿಘ್ನಗಳಿಲ್ಲದೇ ಯಶಸ್ವಿಯಾಗಿ ನಡೆದಿದ್ದು ಇದಕ್ಕೆ ಕಾರಣೀಭೂತರಾದ ನಮ್ಮ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ವೃಂದಕ್ಕೆ ಸುರೇಶ್ ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.

SSLC Exams 8

ಪರೀಕ್ಷಾ ಸಮಯದಲ್ಲಿ ಕಂಡು ಬಂದ ವಿಶೇಷತೆಗಳನ್ನು ಸಚಿವರು ಈ ಸಂರ್ಭದಲ್ಲಿ ವಿವರಿಸಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರಾದ ಕು. ಶಿಲ್ಪಾ ಮತ್ತು ಕಕು. ಸಂಜನಾ ಅವರಿಗೆ ಪರೀಕ್ಷೆಗೆ ಬಂದು ಹೋಗಲು ದೋಣಿಯ ವ್ಯವಸ್ಥೆ ಮಾಡಲಾಗಿತ್ತು. ತಮ್ಮೂರು ಕುರು ದ್ವೀಪ ಪ್ರದೇಶದ ಮನೆಗಳಿಂದ ಈ ಮಕ್ಕಳು ಬೋಟ್ ಮೂಲಕ ಬಂದು ಪರೀಕ್ಷೆ ಬರೆದು ಬೋಟ್‍ನಲ್ಲಿಯೇ ಹಿಂದಿರುಗಿದರು. ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ತೊಕ್ಕಟ್ಟು ಗ್ರಾಮದ ಖಾಸಗಿ ಪ್ರೌಢಶಾಲಾ ಪರೀಕ್ಷಾ ಕೇಂದ್ರದ ಶಾಲೆಯ ವಿಜ್ಞಾನ ಪ್ರಯೋಗಾಲಯದಲ್ಲಿ ವಿದ್ಯುತ್ ಶಾರ್ಟ್ ಸ‌ರ್ಕ್ಯೂಟ್‍ನಿಂದ ಸ್ವಲ್ಪ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಆ ಪ್ರಯೋಗಾಲಯದ ಅಕ್ಕ ಪಕ್ಕದ ಮೂರು ಕೊಠಡಿಯ 36 ಅಭ್ಯರ್ಥಿಗಳನ್ನು ಅದೇ ಪರಿಸರದಲ್ಲಿರುವ ಅದೇ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ 3 ಕೊಠಡಿಗಳಿಗೆ ಸ್ಥಳಾಂತರಿಸಲಾಯಿತು. ಈ ಸ್ಥಳಾಂತರಕ್ಕೆ ತೆಗೆದುಕೊಂಡ ಸಮಯವನ್ನು ಹೆಚ್ಚುವರಿಯಾಗಿ ಈ 3 ಕೊಠಡಿಯ ಅಭ್ಯರ್ಥಿಗಳಿಗೆ ನೀಡಲಾಯಿತು. ಬೆಂಕಿ ಪ್ರಕರಣದಿಂದ ಯಾವುದೇ ತೊಂದರೆಯಾಗಲೀ ಹಾನಿಯಾಗಲಿ ಸಂಭವಿಸಿಲ್ಲ. ಸದರಿ ಪರೀಕ್ಷಾ ಕೇಂದ್ರಕ್ಕೆ ಜಿಪಂ ಸಿಇಒ ಅಗ್ನಿಶಾಮಕದಳದ ಅಧಿಕಾರಿಗಳು, ಪೊಲೀಸ್ ಆಯುಕ್ತರು, ಡಿಡಿಪಿಐ ಪರಿಶೀಲಿಸಿದರು. ಇದನ್ನೂ ಓದಿ: ಯಡಿಯೂರಪ್ಪ ಬದಲಾವಣೆ ಬಗ್ಗೆ ವರ್ಷದ ಹಿಂದೆಯೇ ಹೇಳಿದ್ದೆ, ಅದು ಈಗ ನಿಜವಾಗ್ತಿದೆ: ಸಿದ್ದರಾಮಯ್ಯ

ದಕ್ಷಿಣ ಕನ್ನಡ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಸೇರಿದಂತೆ ಹಲವಾರು ಗಡಿ ಭಾಗದ ಜಿಲ್ಲೆಗಳ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಕೇರಳ, ಮಹಾರಾಷ್ಟ್ರ, ಆಂಧ್ರ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದ ಒಟ್ಟು 770 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ. ಒಬ್ಬ ನೊಂದಾಯಿತ ಅಭ್ಯರ್ಥಿ ಗೈರು ಹಾಜರಾಗಿದ್ದಾನೆ. ಅವರಿಗೆ ಗಡಿ ಪ್ರದೇಶದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು.

SSLC Exams 4

ಕಲಬುರ್ಗಿ ಜಿಲ್ಲೆಯ ಚಿಮ್ಮನಚೋಡ ಗ್ರಾಮದಲ್ಲಿ ರಾತ್ರಿಯಿಡೀ ಸುರಿದ ತೀವ್ರ ಮಳೆಯಿಂದ ಶಾಲೆಗೆ ಹಾದು ಹೋಗುವ ರಸ್ತೆಯಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿ ರಸ್ತೆ ಬಂದ್ ಅಗಿತ್ತು. ಅದನ್ನು ನಿಗದಿತ ಅವಧಿಯಲ್ಲಿ ಸರಿಪಡಿಸಲಾದ ಬಳಿಕ ಎಲ್ಲ ಮಕ್ಕಳು ರಸ್ತೆಯಲ್ಲಿ ಸಾಗಿ ಪರೀಕ್ಷೆ ಬರೆದರು. ಕೋಲಾರದ ಕುರುಬರ ಪೇಟೆಯ ನಿವಾಸಿ ಅವರು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ 55 ವರ್ಷ ವಯಸ್ಸಿನ ಪರೀಕ್ಷೆಗೆ ಹಾಜರಾಗಿದ್ದುದು ವಿಶೇಷವಾಗಿತ್ತು. ಖಾಸಗಿ ಅಭ್ಯರ್ಥಿಯಾದ ಅವರು ಕಳೆದ ವರ್ಷ ಪರೀಕ್ಷೆಗೆ ಹಾಜರಾಗಿ ಅನುತ್ತೀರ್ಣರಾಗಿದ್ದರಿಂದ ಈ ಬಾರಿ ಪುನರಾವರ್ತಿತ ಅಭ್ಯರ್ಥಿಯಾಗಿ ಕೋಲಾರದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಿದ್ದರು. ರಾಜ್ಯದ ಬಹುತೇಕ ಕಡೆಗಳಲ್ಲಿ ಸಂಘ ಸಂಸ್ಥೆಗಳು ಮತ್ತು ಜನಪ್ರತಿನಿಧಿಗಳು ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಉಪಹಾರ ವ್ಯವಸ್ಥೆ ಮಾಡಿದ್ದರು. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಪರೀಕ್ಷೆ ಬರೆದ ಮಕ್ಕಳ ಉತ್ತರ ಪತ್ರಿಕೆಗಳನ್ನು ಪೊಲೀಸ್ ಕಣ್ಗಾವಲಿನಲ್ಲಿ ನಿಗದಿತ ಪರೀಕ್ಷಾ ಕೇಂದ್ರಕ್ಕೆ ತಂದು ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡಲಾಗಿದೆ. ಹಲವಾರು ಕಡೆಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಳಿರು ತೋರಣ ಕಟ್ಟಲಾಗಿತ್ತು. ನಂಜನಗೂಡು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಹಲವಾರು ಕಡೆಗಳಲ್ಲಿ ರಂಗೋಲಿ ಹಾಕಲಾಗಿತ್ತು.

ಹಲವಾರು ಕಡೆಗಳಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಕೆಲವೆಡೆ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ಸೌಲಭ್ಯವಿಲ್ಲದೇ ಯಾವೊಬ್ಬ ಅಭ್ಯರ್ಥಿಯೂ ಪರೀಕ್ಷೆಗೆ ಗೈರು ಹಾಜರಾಗಿಲ್ಲ. ಪರೀಕ್ಷಾ ಪ್ರಕ್ರಿಯೆಯಲ್ಲಿ ನಿಯೋಜಿತರಾಗುವ 1,19,469 ಮಂದಿ ಎಲ್ಲ ಸ್ತರದ ಸಿಬ್ಬಂದಿ ಲಸಿಕೆ ಪಡೆದಿದ್ದರು. ಹಲವಾರು ಕಡೆಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಳಿರು ತೋರಣ ಕಟ್ಟಲಾಗಿತ್ತು. ನಂಜನಗೂಡು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಹಲವಾರು ಕಡೆಗಳಲ್ಲಿ ರಂಗೋಲಿ ಹಾಕಲಾಗಿತ್ತು. ಹಲವಾರು ಕಡೆಗಳಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಕೆಲವೆಡೆ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ಸೌಲಭ್ಯವಿಲ್ಲದೇ ಯಾವೊಬ್ಬ ಅಭ್ಯರ್ಥಿಯೂ ಪರೀಕ್ಷೆಗೆ ಗೈರು ಹಾಜರಾಗಿಲ್ಲ. ಯಾವುದೇ ಅಭ್ಯರ್ಥಿ ಪರೀಕ್ಷಾ ಅವ್ಯವಹಾರದಲ್ಲಿ ತೊಡಗಿಲ್ಲ.

SSLC Exams 5

ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ ಬರೆದ ಅಭ್ಯರ್ಥಿಗಳು 111 ಸನಿಹದ ಪರೀಕ್ಷಾ ಕೇಂದ್ರಗಳನ್ನು ಆರಿಸಿಕೊಂಡ ವಲಸೆ ವಿದ್ಯಾರ್ಥಿಗಳು-10,693 ವಸತಿ ನಿಲಯಗಳಲ್ಲಿದ್ದು ಪರೀಕ್ಷೆ ಬರೆದವರು -2,870

ಮುಖ್ಯೋಪಾಧ್ಯಾಯರ ಲಾಗಿನ್‍ನಿಂದ ಪ್ರವೇಶ ಪತ್ರಗಳನ್ನು ವಿತರಿಸಲಾಗಿದೆ. ಶುಲ್ಕ ಪಾವತಿಸದ ಅಭ್ಯರ್ಥಿಗಳಿಗೂ ಬಿಇಒ ಮತ್ತು ಡಿಡಿಪಿಐ ಹಂತದಲ್ಲಿ ಪ್ರವೇಶ ಪತ್ರ ವಿತರಿಸಲಾಗಿದೆ. ಹಾವೇರಿ ಜಿಲ್ಲೆಯ ಚಿಕ್ಕೇರೂರು ಶಾಲೆಯ 30 ವಿದ್ಯಾರ್ಥಿಗಳು ಪರೀಕ್ಷಾ ಅರ್ಜಿ ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಿದ್ದರೂ ಶಾಲೆಯ ಶಿಕ್ಷಕರೊಬ್ಬರು ಶುಲ್ಕವನ್ನು ಮಂಡಳಿಗೆ ಪಾವತಿಸದೇ ಇರುವುದರಿಂದ 30 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಾಗಿಲ್ಲ. ಆ 30 ವಿದ್ಯಾರ್ಥಿಗಳು, ಬಾಗಲಕೋಟೆ ಜಿಲ್ಲೆಯ 3 ಮತ್ತು ಕೊರಟಗೆರೆ ವಿದ್ಯಾರ್ಥಿನಿ ಗ್ರೀಷ್ಮಾ ಎನ್. ನಾಯಕ್ ಅವರಿಗೆ ಮುಂದೆ ಆಗಸ್ಟ್ ನಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು. ಇದನ್ನೂ ಓದಿ: ಹಳ್ಳ ತುಂಬಿ ರಸ್ತೆ ಮಾರ್ಗ ಬಂದ್ – ಪರೀಕ್ಷೆಗೆ ತೆರಳಲು SSLC ವಿದ್ಯಾರ್ಥಿಗಳ ಪರದಾಟ

ಮಕ್ಕಳು ಸರತಿ ಸಾಲಿನಲ್ಲಿ ಸಾಮಾಜಿಕ ಅಂತರದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಬಂದರು. ನೇರವಾಗಿ ಪರೀಕ್ಷಾ ಕೇಂದ್ರದ ಆರೋಗ್ಯ ತಪಾಸಣಾ ಘಟಕಕ್ಕೆ ಭೇಟಿ ನೀಡಿ ಅಲ್ಲಿ ಜ್ವರ ಪರೀಕ್ಷೆಯ ನಂತರ ಪರೀಕ್ಷಾ ಕೇಂದ್ರದ ಮುಂದೆ ಹಾಕಲಾಗಿದ್ದ ಫಲಕದಲ್ಲಿ ತಮ್ಮ ಕೊಠಡಿ ಸಂಖ್ಯೆಯನ್ನು ನೋಡಿಕೊಂಡು ಪರೀಕ್ಷಾ ಕೊಠಡಿಗಳಿಗೆ ತೆರಳುವ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದಿಂದ ಹೋಗುವಾಗಲೂ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಾರೆ. ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಹಾಜರಿದ್ದು ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರಾದ ಕು. ಶಿಲ್ಪಾ ಮತ್ತು ಕಕು. ಸಂಜನಾ ಅವರಿಗೆ ಪರೀಕ್ಷೆಗೆ ಬಂದು ಹೋಗಲು ದೋಣಿಯ ವ್ಯವಸ್ಥೆ ಮಾಡಲಾಗಿತ್ತು. ತಮ್ಮೂರು ಕುರು ದ್ವೀಪ ಪ್ರದೇಶದ ಮನೆಗಳಿಂದ ಈ ಮಕ್ಕಳು ಬೋಟ್ ಮೂಲಕ ಬಂದು ಪರೀಕ್ಷೆ ಬರೆದು ಬೋಟ್‍ನಲ್ಲಿಯೇ ಹಿಂದಿರುಗಿದರು.

sslc 1

ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ತೊಕ್ಕಟ್ಟು ಗ್ರಾಮದ ಖಾಸಗಿ ಪ್ರೌಢಶಾಲಾ ಪರೀಕ್ಷಾ ಕೇಂದ್ರದ ಶಾಲೆಯ ವಿಜ್ಞಾನ ಪ್ರಯೋಗಾಲಯದಲ್ಲಿ ವಿದ್ಯುತ್ ಶಾರ್ಟ್ ಸ‌ರ್ಕ್ಯೂಟ್‍ನಿಂದ ಸ್ವಲ್ಪ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಆ ಪ್ರಯೋಗಾಲದಯ ಅಕ್ಕ ಪಕ್ಕದ ಮೂರು ಕೊಠಡಿಯ 36 ಅಭ್ಯರ್ಥಿಗಳನ್ನು ಅದೇ ಪರಿಸರದಲ್ಲಿರುವ ಅದೇ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ 3 ಕೊಠಡಿಗಳಿಗೆ ಸ್ಥಳಾಂತರಿಸಲಾಯಿತು. ಈ ಸ್ಥಳಾಂತರಕ್ಕೆ ತೆಗೆದುಕೊಂಡ ಸಮಯವನ್ನು ಹೆಚ್ಚುವರಿಯಾಗಿ ಈ 3 ಕೊಠಡಿಯ ಅಭ್ಯರ್ಥಿಗಳಿಗೆ ನೀಡಲಾಯಿತು. ಬೆಂಕಿ ಪ್ರಕರಣದಿಂದ ಯಾವುದೇ ತೊಂದರೆಯಾಗಲೀ ಹಾನಿಯಾಗಲಿ ಸಂಭವಿಸಿಲ್ಲ. ಸದರಿ ಪರೀಕ್ಷಾ ಕೇಂದ್ರಕ್ಕೆ ಜಿಪಂ ಸಿಇಒ ಅಗ್ನಿಶಾಮಕದಳದ ಅಧಿಕಾರಿಗಳು, ಪೊಲೀಸ್ ಆಯುಕ್ತರು, ಡಿಡಿಪಿಐ ಪರಿಶೀಲಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಮಹಾರಾಷಚವ್ರದ ಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಕೇರಳದ 441 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ. ಅವರಿಗೆ ಗಡಿ ಪ್ರದೇಶದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ನಾಲ್ಕು ಪರೀಕ್ಷಾ ಕೇಂದ್ರಗಳಿಗೆ ಮಹಾರಾಷ್ಟ್ರ ಭಾಗದ 152 ವಿದ್ಯಾರ್ಥಿಗಳು ಬಂದು ಪರೀಕ್ಷೆ ಬರೆದರು. ಅವರೆಲ್ಲರಿಗೂ ಗಡಿ ಭಾಗದಿಂದ ವಾಹನ ವ್ಯವಸ್ಥೆ ಮಾಡಲಾಗಿತ್ತು. ಒಟ್ಟಾರೆಯಾಗಿ ಪರೀಕ್ಷೆ ಯಾವುದೇ ವಿಘ್ನಗಳಿಲ್ಲದೇ ಯಶಸ್ವಿಯಾಗಿ ನಡೆದಿದ್ದು ಇದಕ್ಕೆ ಕಾರಣೀಭೂತರಾದ ನಮ್ಮ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ವೃಂದಕ್ಕೆ ಸಚಿವರು ಕೃತಜ್ಞತೆ ಸಲ್ಲಿಸಿದರು.

Share This Article
Facebook Whatsapp Whatsapp Telegram Copy Link
Cinema News
fans are upset that rashmika mandanna was not given more priority in the movie cocktail
ಕಾಕ್‌ಟೇಲ್‌ 2ನಲ್ಲಿ ರಶ್ಮಿಕಾ ಮೂಲೆಗುಂಪು – ರೊಚ್ಚಿಗೆದ್ರು ಫ್ಯಾನ್ಸ್
love mocktail 3 world television premiere in zee kannada channel
ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್‌ನಲ್ಲಿ ಲವ್ ಮಾಕ್ಟೇಲ್ 3
Rangayana raghu
ದೇವಿ ಮಹಾತ್ಮೆ ಟೀಸರ್‌ನಲ್ಲಿ ರಂಗಾಯಣ ರಘು ಸಖತ್ ಮಿಂಚು
gilli nata 4
ಚೊಚ್ಚಲ ಚಿತ್ರಕ್ಕೆ ಕೋಟಿ ಸಂಭಾವನೆ ಪಡೆದ್ರಾ ಗಿಲ್ಲಿ?

You Might Also Like

FIFA World Cup 2026

FIFA World Cup 2026: ಫಸ್ಟ್ ರೌಂಡ್ ಮುಕ್ತಾಯ – ಟಾಪ್ 10 ತಂಡಗಳು ಯಾವುವು?

34 minutes ago
Mandya ZP CEOs car accident

ಮಂಡ್ಯ ಜಿ.ಪಂ ಸಿಇಒ ಕಾರು ಅಪಘಾತ – ಕೂದಲೆಳೆ ಅಂತರದಲ್ಲಿ ಪಾರು

37 minutes ago
Shawarma and Kebab l

ಶವರ್ಮಾ, ಕಬಾಬ್ ಪ್ರಿಯರಿಗೆ ಶಾಕ್ – ಕ್ಯಾನ್ಸರ್ ಕಾರಕ ಅಂಶ ಪತ್ತೆ

2 hours ago
udupi death beach

ಉಡುಪಿ| ಕರಾವಳಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಯುವಕ ಸಮುದ್ರ ಪಾಲು

2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
© Public TV. Design Company Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact