ಬೆಂಗಳೂರು: 1 ಲಕ್ಷ ರೂ. ಲಂಚ ಕೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಬ್ ಇನ್ಸ್ಪೆಕ್ಟರ್ ಸೌಮ್ಯ ಹಾಗೂ ಹೆಡ್ ಕಾನ್‍ಸ್ಟೇಬಲ್ ಜೆಪಿ ರೆಡ್ಡಿಯವರನ್ನು ಟ್ರ್ಯಾಪ್ ಮಾಡಿದ್ದಾರೆ.
ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಸಬ್ ಇನ್ಸ್ಪೆಕ್ಟರ್ ಸೌಮ್ಯ 1 ಲಕ್ಷ ರೂ. ಲಂಚ ಕೇಳಿದ್ದರು. ಲಂಚ ಪಡೆಯುವ ವೇಳೆ ಪಿಎಸ್‍ಐ ಮತ್ತು ಹೆಡ್ ಕಾನ್‍ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇಬ್ಬರನ್ನೂ ಬಂಧಿಸಿ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಎಸಿಬಿ ಅಧಿಕಾರಿಗಳನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿ ಪೇದೆ ಕುಮಾರ್ ಸ್ಟೇಷನ್ ಮೇಲಿಂದ ಕೆಳಗೆ ಜಿಗಿದಿದ್ದು, ಘಟನೆಯಲ್ಲಿ ಕಾನ್‍ಸ್ಟೆಬಲ್ ಕುಮಾರ್ ಕಾಲು ಮುರಿದಿದೆ. ಒಂದು ಲಕ್ಷ ರೂ. ಲಂಚ ಪಡೆದಿದ್ದ ಹಣವನ್ನು ಪಿಎಸ್‍ಐ ಸೌಮ್ಯ ಕುಮಾರ್ ಕೈಗೆ ಕೊಟ್ಟಿದ್ದರು. ಹೀಗಾಗಿ ಕುಮಾರ್ ಎಸಿಬಿ ಅಧಿಕಾರಿಗಳನ್ನು ಕಂಡು ತಪ್ಪಿಸಿಕೊಳ್ಳುವ ಭರದಲ್ಲಿ ಮೇಲಿಂದ ಜಿಗಿದು ಕಾಲು ಮುರಿದುಕೊಂಡಿದ್ದಾರೆ.