ಮೈಸೂರು: ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಕ್ರಿಮಿನಾಶಕ ಸೇವಿಸಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೆಳಗನಹಳ್ಳಿ ಕಾವಲ್ ಗ್ರಾಮದಲ್ಲಿ ಘಟನೆ ನಡೆದಿದೆ.
15 ವರ್ಷದ ಆದಿತ್ಯ ಆತ್ಮಹತ್ಯೆಗೆ ಶರಣಾದ ಬಾಲಕ. ಅಕ್ಕನಿಗೆ ತನಗಿಂತ ಹೆಚ್ಚಿನ ಬೆಲೆ ಕೊಡಿಸಿದಕ್ಕೆ ಆದಿತ್ಯ ಕೋಪಗೊಂಡಿದ್ದನು. ತನಗೂ ಹೊಸ ಮೊಬೈಲ್ ಕೊಡಿಸಬೇಕೆಂದು ಹಠ ಹಿಡಿದಿದ್ದನು. ಪೋಷಕರು ಮೊಬೈಲ್ ಕೊಡಿಸಲು ಹಿಂದೇಟು ಹಾಕಿದ್ದರಿಂದ ಕ್ರಿಮಿನಾಶಕ ಸೇವಿಸಿದ್ದಾನೆ.
ಕ್ರಿಮಿನಾಶಕ ಸೇವಿಸಿದ್ದ ಬಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆದಿತ್ಯ ಸಾವನ್ನಪ್ಪಿದ್ದಾನೆ. ಜಿಲ್ಲಾಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿದೆ. ಈ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.