ಮೈಸೂರು: ಮೊಬೈಲ್ ಹೆಚ್ಚು ಬಳಸಬೇಡ ಎಂದು ತಾಯಿ ಬಿದ್ಧಿವಾದ ಹೇಳಿದ್ದಕ್ಕೆ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.
ಮೈಸೂರಿನ ಎನ್.ಆರ್.ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿ ಘಟನೆ ನಡೆದಿದ್ದು, ನಿಕಾನ್(19) ಅತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ. ಮೊಬೈಲ್ ಹೆಚ್ಚಾಗಿ ಬಳಸಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವತಿ ನೇಣಣು ಬಿದುಕೊಂಡಿದ್ದಾಳೆ.
ನಿಕಾನ್ ವಿದ್ಯಾಶ್ರಮ ಕಾಲೇಜಿನ ವಿಧ್ಯಾರ್ಥಿನಿಯಾಗಿದ್ದು, ದ್ವತೀಯ ಪಿಯು ಓದುತ್ತಿದ್ದಾಳೆ. ಬುದ್ಧಿವಾದ ಹೇಳಿದ್ದನ್ನೆ ತಲಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.