ಬೆಳಗಾವಿ: ಹಣಕಾಸು ಸೇರಿ ಪ್ರಮುಖ ಇಲಾಖೆಗಳು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಸಚಿವರ ಕೈಯಲ್ಲಿವೆ. ಕಾಂಗ್ರೆಸ್ ಆಡಳಿತದಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಸಿಕ್ಕಿತ್ತು. ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ತಿರುಗೇಟು ನೀಡಿದರು.
ಸುವರ್ಣಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಸ್ಥಾನ ನೀಡಿರುವುದು ಕರ್ನಾಟಕಕ್ಕೆ ಊಟದಲ್ಲಿ ಉಪ್ಪಿನಕಾಯಿ ಸಿಕ್ಕಂತಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಷ್ಟು ಜನರಿಗೆ ಸಚಿವ ಸ್ಥಾನ ಸಿಕ್ಕಿತ್ತು ಎಂಬುದನ್ನು ಮೊದಲು ಸಿದ್ದರಾಮಯ್ಯ ಹೇಳಲಿ. ಹಣಕಾಸು, ಗಣಿ ಮತ್ತು ಭೂವಿಜ್ಞಾನ ಇಲಾಖೆ ರಾಜ್ಯದವರ ಕೈಯಲ್ಲಿದೆ. ರಾಜ್ಯಕ್ಕೆ ಸಿಕ್ಕ ಎಲ್ಲ ಇಲಾಖೆಗಳು ಮಹತ್ವದಾಗಿವೆ ಎಂದರು. ಇದನ್ನೂ ಓದಿ:
ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಅವಕಾಶ ಸಿಕ್ಕಿದೆ. ಇದನ್ನು ಬಳಸಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ. ರಾಜ್ಯದಿಂದ ಆಯ್ಕೆಯಾದ ಸಂಸದರಿಗೆ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ಸಿಕ್ಕಿರುವುದು ಖುಷಿ ತಂದಿದೆ ಎಂದರು.