ನವದೆಹಲಿ: ಜುಲೈ ಮೊದಲ ವಾರದಲ್ಲಿ ಕೇಂದ್ರ ಕ್ಯಾಬಿನೆಟ್ ಪುನರ್‌ರಚನೆಯಾಗಲಿದ್ದು, ಕೆಲ ಸಚಿವರನ್ನು ಕೈಬಿಡುವ ಸಾಧ್ಯತೆಯಿದೆ.
ಹೌದು, ಪ್ರಧಾನಿ ಮೋದಿ ಕೆಲ ಸಚಿವರನ್ನು ಕೈಬಿಟ್ಟು 27 ಹೊಸ ಮುಖಗಳಿಗೆ ಮಂತ್ರಿ ಸ್ಥಾನ ನೀಡಲು ಮುಂದಾಗಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ವರದಿಯಾಗಿದೆ.
Advertisement
Advertisement
ಸಂಭಾವ್ಯ ಪಟ್ಟಿಯಲ್ಲಿ ಯಾರಿದ್ದಾರೆ?
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶದ ಬಿಜೆಪಿ ಜನರಲ್ ಸೆಕ್ರೆಟರಿ ಭೂಪೇಂದ್ರ ಯಾದವ್ ಹಾಗೂ ಕೈಲಾಶ್ ವಿಜಯವರ್ಗಿಯಾ, ಬಿಜೆಪಿ ವಕ್ತಾರ ಹಾಗೂ ಅಲ್ಪ ಸಂಖ್ಯಾತ ಮುಖಂಡ ಝಪರ್ ಇಸ್ಲಾಂ ಮೋದಿ ಸಂಪುಟ ಸೇರಿಕೊಳ್ಳುವ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
Advertisement
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ, ಅಸ್ಸಾಂ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನವಾಲ ಅವರಿಗೂ ಮಂತ್ರಿ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಿದೆ. ಇದನ್ನೂ ಓದಿ: ವಿಶ್ವ ನಾಯಕರ ಪೈಕಿ ಶೇ.66 ಅಂಕದೊಂದಿಗೆ ಮೋದಿ ನಂಬರ್ 1
Advertisement
ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿನ ನಾಯಕರಿಗೆ ಜಾಸ್ತಿ ಅವಕಾಶ ಸಿಗುವ ಸಾಧ್ಯತೆಯಿದೆ. ಈ ಪೈಕಿ ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ಮಹಾರಾಜ ಗಂಜ್ ಸಂಸದ ಪಂಕಜ್ ಚೌಧರಿ, ವರುಣ್ ಗಾಂಧಿ ಹಾಗೂ ಓಆಂ ಮೈತ್ರಿ ಪಕ್ಷದ ಅನುಪ್ರಿಯಾ ಪಟೇಲ್ ಹೆಸರು ಮುಂಚೂಣಿಯಲ್ಲಿದೆ.
ಒಡಿಶಾ ಸಂಸದ ಅಶ್ವಿನ್ ವೈಷ್ಣವ್, ಬಂಗಾಳದ ಮಾಜಿ ರೈಲ್ವೇ ಸಚಿವ ದಿನೇಶ್ ತ್ರಿವೇದಿ, ರಾಜ್ಯ ಸಭಾ ಸದಸ್ಯ ಅನಿಲ್ ಜೈನ್, ರಾಜಸ್ಥಾನದಿಂದ ಕಿರಿಯ ಸಂಸದ ಚೌಧರಿ, ರಾಹುಲ್ ಕಸ್ವಾನ್ ಮತ್ತು ಸಿಕಾರ್ ಸಂಸದ ಸುಮೇಧಾನಂದ ಸರಸ್ವತಿ ಕೂಡ ಕೇಂದ್ರ ಸಂಪುಟ ಸೇರಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯಿಂದ ಸಂಸದೆ ಮೀನಾಕ್ಷಿ ಲೇಖಿ, ಬಿಹಾರದಲ್ಲಿ ಚಿರಾಗ್ ಪಾಸ್ವಾನ್ ವಿರುದ್ಧ ದಂಗೆ ಎದ್ದ ಪಶುಪತಿ ಪರಾಸ್, ಜೆಡಿಯು ನಾಮನಿರ್ದೇಶನಗಳಾದ ಆರ್.ಸಿ.ಪಿ. ಸಿಂಗ್ ಮತ್ತು ಸಂತೋಷ್ ಕುಮಾರ್ ಕೂಡ ಸಂಭಾವ್ಯ ಪಟ್ಟಿಯಲ್ಲಿದ್ದಾರೆ.