ರಾಯಚೂರು: ಸಿಎಂ ಬದಲಾವಣೆ ಹೇಳಿಕೆ ವಿಚಾರ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಅಂತ ಉಪಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದ್ದಾರೆ.
ನಗರದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಬಳಿಕ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು, ರಾಷ್ಟ್ರಾಧ್ಯಕ್ಷರು ಆ ಬಗ್ಗೆ ಸೂಕ್ತ ಸಂದರ್ಭದಲ್ಲಿ ಕ್ರಮಕೈಗೊಳ್ಳುತ್ತಾರೆ ಎಂದರು.
Advertisement
Advertisement
ಕಳೆದ ವರ್ಷದ ಬೆಳೆ ವಿಮೆಯ ಹಣ ರೈತರಿಗೆ ಸಿಗದೆ ಹೋಗಿದೆ. ಈ ಬಗ್ಗೆಯೂ ಪರಿಶೀಲಿಸಲಾಗುವುದು. ಭತ್ತ, ತೊಗರಿ, ಉದ್ದು ಹಾಗೂ ಉಂಡೆ ಕೊಬ್ಬರಿಗೆ ಬೆಂಬಲ ಬೆಲೆಯಲ್ಲಿ ಖರೀದಿಸಲು ಇಂದಿನಿಂದ ನೊಂದಣಿ ಕಾರ್ಯ ಆರಂಭಿಸಲಾಗುವುದು. ಡಿಸೆಂಬರ್ 1 ರಿಂದ ಖರೀದಿ ಕೇಂದ್ರ ಆರಂಭಿಸಲಾಗುವುದು. ಹತ್ತಿ ಖರೀದಿ ಕೇಂದ್ರ ಆರಂಭಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು. ಕೃಷ್ಣಾ ನದಿ ಪ್ರವಾಹಕ್ಕೆ ತುತ್ತಾಗುವ ಭೀತಿಯಲ್ಲಿರುವ ಗುರ್ಜಾಪುರ ಗ್ರಾಮ ಸ್ಥಳಾಂತರಕ್ಕೆ ಸಿದ್ಧತೆ ನಡೆದಿದೆ ಎಂದು ತಿಳಿಸಿದರು.
Advertisement
Advertisement
ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ರೈತರು ಮನವಿ ಸಲ್ಲಿಸಿದರು. ಇದೇ ವೇಳೆ ಮಳೆ ಪ್ರವಾಹದಿಂದ ಬೆಳೆ ಹಾಳಾಗಿದೆ ಉತ್ತಮ ಬೆಲೆ ಸಿಗದಿದ್ದರೆ ಹೇಗೆ ಅಂತ ಪ್ರಶ್ನಿಸಿದ ರೈತರಿಗೆ ಗದರಿದ ಸಚಿವರು ನೀನು ಒಂದು ಬಾರಿ ಅಧಿಕಾರಕ್ಕೆ ಬಾ ತಿಳಿಯುತ್ತೆ. ನನಗೂ ರೈತರ ಪರಸ್ಥಿತಿ ಅರ್ಥವಾಗುತ್ತೆ ಸರ್ಕಾರ ವೈಜ್ಞಾನಿಕ ಬೆಲೆ ನಿಗದಿ ಮಾಡುತ್ತೆ ಅಂತ ಸವದಿ ತಿಳಿಸಿದರು.