ಯಾದಗಿರಿ: ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹಾಗೂ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ ಜಿಲ್ಲೆಯಲ್ಲಿ ಜುಲೈ 12 ರಿಂದ 14ರ ವರೆಗೆ ಯಲ್ಲೋ ಅಲಟ್9 ಘೋಷಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸಮಿತಿ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ವಿಪತ್ತು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಸಾರ್ವಜನಿಕರು ನದಿ, ನೀರು ಪ್ರದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ನಿಲ್ಲಬಾರದು. ತಗ್ಗು ಪ್ರದೇಶಗಳ ನಾಗರೀಕರು ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಮನವಿ ಮಾಡಿದ್ದಾರೆ.