ಯಾದಗಿರಿ: ಜಿಲ್ಲೆಯಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಸಾವಿರ ಗಡಿ ದಾಟುತ್ತಿದೆ. ನಗರದ ವ್ಯಾಪಾರ ವಹಿವಾಟು ಸ್ತಬ್ಧಗೊಂಡಿದೆ. ಹೀಗಾಗಿ ಯಾದಗಿರಿ ಜಿಲ್ಲಾಡಳಿತ ಲಾಕ್‍ಡೌನ್ ಮಾಡಲು ಮುಂದಾಗಿದೆಯೇ ಎಂಬ ಅನುಮಾನ ಈಗ ಕಾಡುತ್ತಿದೆ.
ಇಂದು ಬೆಳಗ್ಗೆಯಿಂದ ಅಗತ್ಯ ವಸ್ತುಗಳ ಖರೀದಿ ಮತ್ತು ವ್ಯಾಪಾರಕ್ಕೆ ಮಾತ್ರ ಜಿಲ್ಲಾಡಳಿತ ಅವಕಾಶ ನೀಡಿದ್ದು, ವಿಶೇಷ ಅಧಿಕಾರದ ಮೂಲಕ ವ್ಯಾಪಾರ ವಹಿವಾಟಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಬ್ರೇಕ್ ಹಾಕಿದ್ದಾರೆ. ಅಂಗಡಿ ಮುಂಗಟ್ಟುಗಳನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ಮುಚ್ಚಿಸಿದ್ದಾರೆ.
ಶಹಪುರ, ಸುರಪುರ, ಗುರುಮಿಠಕಲ್ ಸೇರಿದಂತೆ ಎಲ್ಲ ತಾಲೂಕುಗಳಲ್ಲಿ ಲಾಕ್‍ಡೌನ್ ಪರಿಸ್ಥಿತಿ ಬಿಂಬಿತವಾಗುತ್ತಿದೆ. ಜಿಲ್ಲಾಡಳಿತದ ಈ ನಿರ್ಣಯಕ್ಕೆ ಸಾರ್ವಜನಿಕರು ಮತ್ತು ವ್ಯಾಪಾರಸ್ಥರ ಆಕ್ರೋಶ ಹೊರಹಾಕುತ್ತಿದ್ದಾರೆ.