ಯಾದಗಿರಿ: ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಸಹಯೋಗದಲ್ಲಿ ರಾಜ್ಯದ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಣೆಯ, ಜ್ಞಾನದೀವಿಗೆ ಕಾರ್ಯಕ್ರಮ ಇಂದು ಯಾದಗಿರಿ ಜಿಲ್ಲೆಯಲ್ಲಿ ನಡೆಯಿತು.
ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಕಂದಕೂರ ಗ್ರಾಮದ ಪ್ರೌಢ ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಮತ್ತು ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಕಂದಕೂರ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದ್ರು. ಬಳಿಕ ಹತ್ತನೇಯ ತರಗತಿ 98 ವಿದ್ಯಾರ್ಥಿಗಳಿಗೆ 48 ಟ್ಯಾಬ್ ವಿತರಣೆ ಮಾಡಿದ್ರು. ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾಂತ್, ಎಸ್‍ಡಿಎಂಸಿ ಅಧ್ಯಕ್ಷ ಅಶೋಕ್ ರೆಡ್ಡಿ ಶಾಲಾ ಮುಖ್ಯ ಶಿಕ್ಷಕ ಸಾಬಪ್ಪ ಭೂತಾಲ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Advertisement
Advertisement
ಜ್ಞಾನ ದೀವಿಗೆ ಕಾರ್ಯಕ್ರಮಕ್ಕೆ ಕೈ ಜೋಡಿಸಿರುವ ಶರಣಗೌಡ ಕಂದಕೂರ ಮಾತನಾಡಿ, ನನ್ನ ತಂದೆ ಕ್ಷೇತ್ರದ ಎರಡು ಶಾಲೆಗಳಿಗೆ ಪಬ್ಲಿಕ್ ಟಿವಿ ಕಡೆಯಿಂದ ಟ್ಯಾಬ್ ನೀಡಿದ್ದಾರೆ. ಇದು ನಮ್ಮ ಕ್ಷೇತ್ರದ ಜನರ ಅದೃಷ್ಟ ನಾವೆಲ್ಲರೂ ಪಬ್ಲಿಕ್ ಟಿವಿಗೆ ಆಬಾರಿಯಾಗಿದ್ದೆವೆ ಎಂದ್ರು.
Advertisement
ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾಂತ್ ಮಾತನಾಡಿ, ಕಳೆದ ಬಾರಿ ಟ್ಯಾಬ್ ವಿತರಣೆ ಮಾಡಿದ ಶಾಲೆಗಳಿಂದ ನಮ್ಮ ಇಲಾಖೆ, ಅಭಿಪ್ರಾಯ ಸಂಗ್ರಹಿಸಿದೆ ಎಲ್ಲಾ ವಿದ್ಯಾರ್ಥಿಗಳು ಟ್ಯಾಬ್ ಗಳಿಂದ ಅತೀ ಹೆಚ್ಚು ಉಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪಬ್ಲಿಕ್ ಟಿವಿಯ ಕಾರ್ಯ ಎಲ್ಲರೂ ಮೆಚ್ಚವಂತದ್ದು ಎಂದರು.