ಬೆಂಗಳೂರು: ಉಪಚುನಾವಣೆ ರಂಗೇರುತ್ತಿದ್ದಂತೆ ರಾಜಕೀಯ ನಾಯಕರ ವಾಗ್ದಾಳಿ ಆರಂಭವಾಗಿದೆ. ಈಗ ಮಾಜಿ ಸಿಎಂ ಕುಮಾರಸ್ವಾಮಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಟ್ವಿಟ್ಟರ್ ಮೂಲಕ ಕಿಡಿ ಕಾರಿದ್ದಾರೆ.
ಇಂದು ಸಿದ್ದರಾಮಯ್ಯನ ವಿರುದ್ಧ ಗುಡುಗಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ ಎಂದು ಕುಟುಕಿದ್ದಾರೆ.
Advertisement
ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ.
1/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 7, 2020
Advertisement
ಜನ ಕಲ್ಯಾಣಕ್ಕೆ ದೂರದೃಷ್ಟಿಯ ಕಾರ್ಯಸಾಧ್ಯವಾದ ಯೋಜನೆಗಳನ್ನು ರೂಪಿಸುವಲ್ಲಿ ಎಡವಿದ್ದ ಸಿದ್ದರಾಮಯ್ಯ ಅಗ್ಗದ ಯೋಜನೆಗಳ ಮೂಲಕ ಜನರ ತುಟಿಗೆ ತುಪ್ಪ ಸವರುವ ಆಡಳಿತಕ್ಕೆ ಕಳೆದ ಬಾರಿ ತಕ್ಕ ಶಾಸ್ತಿ ಮಾಡಿದ್ದರು. ಇವರ ದುರಾಡಳಿತವನ್ನು ಜನತೆ ಇನ್ನೂ ಮರೆತಿಲ್ಲ. ಉಪಚುನಾವಣೆಯಲ್ಲೂ ಕಾಂಗ್ರೆಸ್ಸಿಗೆ ಪಾಠ ಕಲಿಸಲಿದ್ದಾರೆ ಎಂದು ಶಿರಾ ಉಪಚುನಾವಣೆಯ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.
Advertisement
ಯಾರನ್ನು ಯಾರು ಎಲ್ಲಿಗೆ ಕಳುಹಿಸಿದರು? ಸ್ವಾರ್ಥ ರಾಜಕಾರಣಕ್ಕಾಗಿ ಮೂಲ ಕಾಂಗ್ರೆಸ್ಸಿಗರ ಮೇಲೆ ಯಾರು ಸವಾರಿ ಮಾಡುತ್ತಿದ್ದಾರೆ? ಎಂಬುದನ್ನು ತಿಳಿಯದಷ್ಟು ಜನ ಪೆದ್ದರಲ್ಲ. ನಮ್ಮ ಮೂವರು ಶಾಸಕರು ಪಕ್ಷದಿಂದ ಹೊರಹೋಗಲು ನಡೆದ ಸಂಚಿನಲ್ಲಿ ಹಣ ಅಧಿಕಾರದ ಆಮಿಷ ಮಾತ್ರವಲ್ಲ. ಕೆಲವರ 'ಕೈ'ವಾಡ ಕೂಡ ಕಾರಣ.
3/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 7, 2020
Advertisement
ಯಾರನ್ನು ಯಾರು ಎಲ್ಲಿಗೆ ಕಳುಹಿಸಿದರು? ಸ್ವಾರ್ಥ ರಾಜಕಾರಣಕ್ಕಾಗಿ ಮೂಲ ಕಾಂಗ್ರೆಸ್ಸಿಗರ ಮೇಲೆ ಯಾರು ಸವಾರಿ ಮಾಡುತ್ತಿದ್ದಾರೆ? ಎಂಬುದನ್ನು ತಿಳಿಯದಷ್ಟು ಜನ ಪೆದ್ದರಲ್ಲ. ನಮ್ಮ ಮೂವರು ಶಾಸಕರು ಪಕ್ಷದಿಂದ ಹೊರಹೋಗಲು ನಡೆದ ಸಂಚಿನಲ್ಲಿ ಹಣ ಅಧಿಕಾರದ ಆಮಿಷ ಮಾತ್ರವಲ್ಲ. ಕೆಲವರ ‘ಕೈ’ವಾಡ ಕೂಡ ಕಾರಣ ಇದೇ ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಸಿದ್ದರಾಮಯ್ಯಯವರನ್ನು ಕುಟುಕಿದ್ದಾರೆ.
ಮೈತ್ರಿ ಸರ್ಕಾರ ತೆಗೆಯಲು ಅಳಲೇಕಾಯಿ ಪಂಡಿತನಂತೆ ಔಷಧ ಅರೆದ ವ್ಯಕ್ತಿಗೆ ನಮ್ಮ ಮೂವರು ಶಾಸಕರು ಕದ್ದು ಓಡಿ ಹೋದರೋ? ನಾವೇ ಕತ್ತು ಹಿಡಿದು ನೂಕಿದವೋ? ಎಂದು ಗೊತ್ತಿಲ್ಲದ ಜಾಣ ಪೆದ್ದ ನಾಗಿದ್ದು ವಿಪರ್ಯಾಸ.
5/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 7, 2020
ಕಾಂಗ್ರೆಸ್ ಪಕ್ಷದ ಹತ್ತಾರು ಮಂದಿ ಪೈಕಿ ‘ಎದೆ ಸೀಳಿದರೆ ಸಿದ್ದು ಕಾಣುತ್ತಾರೆ’ ಎಂಬ ಅನುಯಾಯಿಗಳು ಬಿಜೆಪಿಗೆ ಹಾರಲು ಮಸಲತ್ತು ನಡೆಸಿದವರು ಯಾರೆಂಬುದು ‘ಸಿದ್ಧವನ’ದಲ್ಲಿ ಕುಳಿತಿದ್ದ ‘ರಾಮ’ನಿಗೂ ಗೊತ್ತಿತ್ತು. ಮೈತ್ರಿ ಸರ್ಕಾರ ತೆಗೆಯಲು ಅಳಲೇಕಾಯಿ ಪಂಡಿತನಂತೆ ಔಷಧ ಅರೆದ ವ್ಯಕ್ತಿಗೆ ನಮ್ಮ ಮೂವರು ಶಾಸಕರು ಕದ್ದು ಓಡಿ ಹೋದರೋ? ನಾವೇ ಕತ್ತು ಹಿಡಿದು ನೂಕಿದವೋ ಎಂದು ಗೊತ್ತಿಲ್ಲದ ಜಾಣ ಪೆದ್ದನಾಗಿದ್ದು ವಿಪರ್ಯಾಸ ಎಂದು ಟ್ವೀಟ್ ಮಾಡಿದ್ದಾರೆ.