ಹಾವೇರಿ: ಬೆಂಗಳೂರಿನಲ್ಲಿ ನಡೆದ ಗಲಭೆ ಸಂಬಂಧ ಯಾರನ್ನೂ ಬ್ಲಾಕ್‍ಮೇಲ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸಚಿವ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬೆಂಗಳೂರಿನಲ್ಲಿ ಕಾಂಗ್ರೆಸ್ಸಿನ ಕೆಲವು ಕಾರ್ಪೊರೇಟರ್ ಗಳಿಗೆ ನೋಟಿಸ್ ನೀಡಿರೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಡಿ.ಕೆ ಶಿವಕುಮಾರ್ ಅವರಿಗೆ ಈ ನೆಲದ ಕಾನೂನು ಗೊತ್ತಿದೆ ಎಂದು ಭಾವಿಸಿದ್ದೇನೆ. ಗಲಭೆಯಲ್ಲಿ ಯಾರು ಯಾರು ಇದ್ದಾರೆ. ಅವರನ್ನ ನೇರವಾಗಿ ಅರೆಸ್ಟ್ ಮಾಡೋದಿದೆ. ನೊಟೀಸ್ ಕೊಟ್ಟರೆ ತಪ್ಪೇನೂ ಇಲ್ಲ. ನಾವು ಕಾನೂನಾತ್ಮಕವಾಗಿ ಕೊಟ್ಟಿದ್ದೇವೆ. ಅವರು ತಪ್ಪು ಮಾಡಿದ್ದರೆ ಹೆದರಬೇಕು. ಇಲ್ಲದಿದ್ರೆ ಉತ್ತರ ಕೊಡಬೇಕು. ನಾವು ಕಾನೂನು ಪಾಲನೆ ಮಾಡಿದ್ದೇವೆ. ಅವರೂ ಮಾಡಬೇಕಾಗುತ್ತೆ ಅಂತ ಹೇಳಿದ್ದಾರೆ.
ಇನ್ನು ಪ್ರಕರಣದಲ್ಲಿ ಯಾರನ್ನೂ ಬ್ಲಾಕ್ ಮೇಲ್ ಮಾಡೋ ಪ್ರಶ್ನೆ ಇಲ್ಲ. ಅಖಂಡ ಶ್ರೀನಿವಾಸಮೂರ್ತಿ ಒಬ್ಬ ಜವಬ್ದಾರಿಯುತ ಶಾಸಕರು. ಅವರು ಏನು ದೂರು ಕೊಡಬೇಕೋ ಅದನ್ನ ಕೊಟ್ಟಿದ್ದಾರೆ. ಅವರ ದೂರಿನ ಆಧಾರದ ಮೇಲೆ ತನಿಖೆ ನಡೆಯುತ್ತಿದೆ. ಶಾಸಕ ಶ್ರೀನಿವಾಸ ಮೂರ್ತಿ ಭದ್ರತೆ ಕೇಳಿದ್ದಾರೆ. ಅವರಿಗೆ ಭದ್ರತೆ ಕೊಟ್ಟಿದ್ದೇವೆ ಅಂತ ಹೇಳಿದ್ದಾರೆ. ಇನ್ನು ಶಾಸಕ ಜಮೀರ್ ಅಹಮ್ಮದ್ ಖಾನ್ ಪರಿಹಾರ ಘೋಷಣೆ ಮಾಡಿದ್ದು ನೋಡಿದ್ರೆ ಅವರು ಯಾರ ಪರವಾಗಿ ಇದ್ದಾರೆ ಎಂಬುದು ಗೊತ್ತಾಗುತ್ತದೆ ಅಂತ ಹೇಳಿದ್ದಾರೆ. ಅಲ್ಕದೆ ಮುಂದಿನ ವಾರದಲ್ಲಿ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಂನಂತಹ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರನ್ನ ಕರೆದು ಸಭೆ ಮಾಡಲಾಗುವುದು. ಇದನ್ನೂ ಓದಿ: ಗಲಭೆ ನಿಯಂತ್ರಿಸಲು ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ: ಡಿಕೆಶಿ
ಸಾಮಾಜಿಕ ಸ್ವಾಸ್ಥ್ಯ ಕದಡುವ ವಿಷಯಗಳನ್ನ ಫಿಲ್ಟರ್ ಮಾಡೋ ಬಗ್ಗೆ ಮುಖ್ಯಸ್ಥರ ಜೊತೆ ಚರ್ಚಿಸಲಾಗುವುದು. ಅವರ ಪ್ರತಿಕ್ರಿಯೆ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮಾತ್ರವಲ್ಲದೆ ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ತನಿಖೆ ನಡೆಯುತ್ತಿದೆ. ಈಗಾಗಲೆ ಆರೋಪಿಗಳನ್ನ ಅರೆಸ್ಟ್ ಮಾಡ್ತಿದ್ದೇವೆ. ಅರೆಸ್ಟ್ ಆದವರ ಮುಖಾಂತರ ಅವರ ಹಿಂದೆ ಯಾರ್ಯಾರಿದ್ದಾರೆ, ಏನೇನು ಷಡ್ಯಂತ್ರ ಇದೆ ಎಂಬುದನ್ನ ತನಿಖೆ ಮಾಡ್ತಿದ್ದೇವೆ. ಕೆಲವೇ ದಿನಗಳಲ್ಲಿ ಎಲ್ಲವೂ ಬಹಿರಂಗ ಆಗುತ್ತದೆ ಅಂತ ಸಚಿವ ಬೊಮ್ಮಾಯಿ ಹೇಳಿದ್ದಾರೆ. ಇದನ್ನೂ ಓದಿ: ಮುಂದಿನ ದಿನದಲ್ಲಿ ಕೆಂಪು ಕೋಟೆಯಲ್ಲಿ ನಾವು ಭಾಷಣ ಮಾಡ್ತೇವೆ: ಡಿಕೆಶಿ