ಹಾಸನ: ಯಾರಿಂದಲೂ ಸಹ ದೇವೇಗೌಡರ ಕುಟುಂಬವನ್ನು ಒಡೆಯಲು ಸಾಧ್ಯವಿಲ್ಲ ಎಂದು ಹೇಳಿ ಮಂಡ್ಯ ಸಂಸದೆ ಸುಮಲತಾ ವಿರುದ್ಧ ಎಚ್. ಡಿ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೆಡಿಎಸ್ ಪಕ್ಷ ಉಳಿಯುವುದಾದರೆ ಪ್ರಜ್ವಲ್ ರೇವಣ್ಣ ಅವರಿಂದ ಮಾತ್ರ ಎಂಬ ಸುಮಲತಾ ಹೇಳಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರು.
Advertisement
Advertisement
ಇಂತಹ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲು ಹೋದರೆ ನಾವು ಸಣ್ಣವರಾಗುತ್ತೇವೆ. ಕುಟುಂಬ ಒಡೆಯುವ ಇಂತಹ ಹೇಳಿಕೆಯನ್ನು ಸಂಸದೆ ಸುಮಲತಾ ಅವರು ನೀಡಬಾರದು. ಅಕ್ರಮ ಗಣಿಗಾರಿಕೆ ಮಾಡಿದ್ದರೆ ತನಿಖೆ ಮಾಡಿ ಕ್ರಮ ಕೈಗೊಂಡು ಮುಟ್ಟುಗೋಲು ಹಾಕಬೇಕು. ಅದನ್ನು ಅದನ್ನು ಬಿಟ್ಟು ಕುಟುಂಬ ಒಡೆಯುವ ಕೆಲಸಕ್ಕೆ ಮುಂದಾಗಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
Advertisement
ಸುಮಲತಾ ಅವರ ಹೇಳಿಕೆ ಸಂಬಂಧ ಪ್ರಜ್ವಲ್ ರೇವಣ್ಣ ನನಗೆ ಫೋನ್ ಮಾಡಿ ನನ್ನ ಹೆಸರು ಏಕೆ ತರುತ್ತಿದ್ದಾರೆ ಎಂದು ಕೇಳಿದ್ದರು. ದಿವಂಗತ ನಟ ಅಂಬರೀಶ್ ಬಗ್ಗೆ ಅಪಾರವಾದ ಗೌರವವಿದೆ. ಕುಮಾರಸ್ವಾಮಿ ಹಾಗೂ ಅಂಬರೀಶ್ ಅವರೊಂದಿಗಿನ ಸಂಬಂಧ ಹೇಗಿತ್ತು ಎಂದು ನಾನು ಕಂಡಿದ್ದೇನೆ. ಕುಮಾರಸ್ವಾಮಿ ಎಂದಿಗೂ ಸಹ ದ್ವೇಷದ ರಾಜಕಾರಣ ಮಾಡಿಲ್ಲ. ಬಡವರ ಬಗ್ಗೆ ಕರುಣೆ ಇರುವ ರಾಜಕಾರಣ ಕುಮಾರಸ್ವಾಮಿ. ದೇವೇಗೌಡರ ಕುಟುಂಬ ಯಾರಿಂದಲೂ ಸಂಸ್ಕೃತಿ ಕಲಿಯಬೇಕಾಗಿಲ್ಲ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಸುಮಲತಾರಿಗೆ ರಾಜಕಾರಣದಲ್ಲಿ ಅನುಭವದ ಕೊರತೆ ಇದೆ: ನಿಖಿಲ್
Advertisement
ಪ್ರಜ್ವಲ್ ನನ್ನು ಎತ್ತಿಕಟ್ಟಿ ಕುಟುಂಬವನ್ನು ಒಡೆಯುವ ಕಾರ್ಯಕ್ರಮ ಯಾರಿಂದಲೂ ಆಗುವುದಿಲ್ಲ. ಜೆಡಿಎಸ್ ಪಕ್ಷ ಉಳಿಸಲು ಕಾರ್ಯಕರ್ತರಿದ್ದಾರೆ. ಕುಟುಂಬದಿಂದ ಪಕ್ಷ ಉಳಿಯಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ ಅವರು ನಮ್ಮದೇನಾದರೂ ಕ್ರಷರ್ ಇದ್ಯಾ? ಕಾಲೇಜುಗಳಿವೆಯಾ? ಕುಮಾರಸ್ವಾಮಿ ದುಡ್ಡು ಹೊಡೆಯುತ್ತಾನೆ ಎನ್ನುತ್ತಾರಲ್ಲ. ಅದು ನ್ಯಾಯವೇ? ಒಬ್ಬ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರು ಅಂಬರೀಶ್ ಮೃತರಾದ ಮಂಡ್ಯಕ್ಕೆ ಹೆಲಿಕಾಪ್ಟರ್ ನಲ್ಲಿ ತೆಗೆದುಕೊಂಡು ಹೋದರು. ಕುಮಾರಸ್ವಾಮಿ ಪ್ರಚಾರ ಪಡೆಯಲು ಕೆಲಸ ಮಾಡಿಲ್ಲ. ಯಡಿಯೂರಪ್ಪ ಸರ್ಕಾರದ ಅಧಿಕಾರಿಗಳೇ ಕೆಆರ್‍ಎಸ್‍ಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ ಎಂದರು.