ಯಾರಿಗೆ ಗೌರವ ಕೊಡಬೇಕು ಅನ್ನೋದು ಸಿಟಿ ರವಿಗೆ ಗೊತ್ತಿಲ್ಲ: ಸಿದ್ದರಾಮಯ್ಯ

Public TV
1 Min Read
CT RAVI SIDDARAMAIAH

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಗೆ ಇತಿಹಾಸ ಗೊತ್ತಿಲ್ಲ. ಯಾರಿಗೆ ಗೌರವ ಕೊಡಬೇಕು ಅನ್ನೋದು ಗೊತ್ತಿಲ್ಲ. ಸಂವಿಧಾನ ಬದಲಿಸ್ತೀವಿ ಅನ್ನೋರಿಗೆ ದೇಶ ಕಟ್ಟಿದವರ ಬಗ್ಗೆ ಏನು ಗೊತ್ತಿರುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬೇಕಿದ್ರೆ ಕಾಂಗ್ರೆಸ್ ಕಚೇರಿಯಲ್ಲಿ ನೆಹರು ಹುಕ್ಕಾ ಬಾರ್ ತೆರೆಯಲಿ ಎಂಬ ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರಿಗೆ ಗುಜರಾತ್ ಅಹಮ್ಮದಾಬಾದ್ ನಲ್ಲಿ ನರೇಂದ್ರ ಮೋದಿ ಹೆಸರು ಯಾಕೆ ಇಟ್ಟಿದ್ದಾರೆ. ದೆಹಲಿಯಲ್ಲಿ ಅರುಣ್ ಜೇಟ್ಲಿ, ವಾಜಪೇಯಿ, ದೀನ ದಯಾಳ್ ಉಪಧ್ಯಾಯ, ಸಾವರ್ಕರ್ ಹೆಸರೆಲ್ಲಾ ಯಾಕಿಟ್ಟರು. ಅವರ ಹೆಸರಲ್ಲಿ ಹುಕ್ಕಾ ಬಾರ್ ಇಡಬಹುದಲ್ಲ. ನಾನು ಹಾಗೆ ಹೇಳಲ್ಲ. ಅಷ್ಟು ಲಘುವಾಗಿ ಮಾತನಾಡಲ್ಲ ಎಂದು ಕಿಡಿಕಾರಿದರು.

FotoJet 7 28

ರವಿ ನ್ಯಾಷನಲ್ ಸಕ್ರೆಟರಿ ರೆಸ್ಪಾನ್ಸಿಬಿಲಿಟಿ ತಿಳಿದು ಮಾತನಾಡಬೇಕು. ಜವಬ್ದಾರಿಯಿಂದ ಮಾತನಾಡಬೇಕು. ಎಲ್ಲರಿಗೂ ಗೊತ್ತು ಯಾರು ಮಾನನಷ್ಟ ಮೊಕದ್ದಮೆ ಹಾಕಲ್ಲ. ಸಾರ್ವಜನಿಕವಾಗಿ ಸಂಸ್ಕೃತಿ ಹೀನವಾಗಿ ಮಾತನಾಡಿದರೆ ಸಣ್ಣವರಾಗುತ್ತೇವೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್, ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿಟಿ ರವಿ

ಸಿಟಿ ರವಿ ಹೇಳಿದ್ದೇನು..?
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಟಿ ರವಿ, ಕಾಂಗ್ರೆಸ್‍ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ. ನೆಹರು, ಇಂದಿರಾ ಗಾಂಧಿಯವರ ಒಳ್ಳೆಯ ಕೊಡುಗೆಗಳನ್ನು ನೆನೆಯುತ್ತೇವೆ. ಆದರೆ ಅವರು ಮಾಡಿದ್ದ ಎಲ್ಲವನ್ನೂ ಒಪ್ಪಿಕೊಳುವುದ್ದಕ್ಕೆ ನಾವೇನು ಗುಲಾಮರಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *