ಚಾಮರಾಜನಗರ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರಾಜ್ಯದಲ್ಲಿ ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಯತ್ನಾಳ್ ರಾಜೀನಾಮೆ ಕೊಟ್ಟು ಮನೆಯಲ್ಲಿ ಇರಬೇಕು: ಬಸವರಾಜ್ ದಡೇಸಗೂರು
ಚಾಮರಾಜನಗರದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಕುರಿತು ಹೈಕಮಾಂಡ್ ಕಾದು ನೋಡುತ್ತಿದೆ. ಎಷ್ಟು ಬೇಗ ಸಿಎಂ ಬಗಲಾಗುತ್ತಾರೋ ಅಷ್ಟು ಬೇಗ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗುತ್ತಾರೆ. ಒಳ್ಳೆಯವರು, ಪ್ರಾಮಾಣಿಕರು, ಹಿಂದುತ್ವದ ಪರ ಇರುವವರು ಸಿಎಂ ಆಗುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಕೆಟ್ಟವರೊಂದಿಗೆ ಒಳ್ಳೆಯವರ ಸೇರ್ಪಡೆ – ಬಿಎಸ್‍ವೈ ವಿರುದ್ಧ ಗುಡುಗಿದ ಯತ್ನಾಳ್
ಹೈಕಮಾಂಡ್ ಒಂದು ವೇಳೆ ನನಗೆ ಅವಕಾಶ ಕೊಟ್ಟರೆ ಬೇಡ ಅನ್ನಲ್ಲ. ಅಲ್ಲದೇ ಕೆಲವು ಶಾಸಕರು ಟಿಕೆಟ್ ಕೊಡಲ್ಲ ಅನ್ನೋ ಭಯದಿಂದ ಮಾತನಾಡುತ್ತಿಲ್ಲ ಅಂತಾ ತಮ್ಮದೇ ಪಕ್ಷದವರ ಬಗ್ಗೆ ಕಿಡಿಕಾರಿದ್ದಾರೆ.
ಅಖಿಲ ಭಾರತ ಪಂಚಮಶಾಲಿ ಮಠಾಧೀಶರ ಒಕ್ಕೂಟ ಸ್ಥಾಪನೆ ರಾಜಕೀಯ ಪ್ರೇರಿತವಾಗಿದೆ. ನಿನ್ನೆ ಸಭೆ ಸೇರಿದ್ದವರು ಪಂಚಮಶಾಲಿ ಪೀಠಾದಿಪತಿಗಳಲ್ಲ, ಅವರೆಲ್ಲ ವಿರಕ್ತ ಮಠದ ಸ್ವಾಮೀಜಿ ಎಂದು ಹೇಳಿದ್ದಾರೆ.