ಬೆಂಗಳೂರು: ಕೊರೊನಾ ಎರಡನೇ ಅಲೆ ಸ್ಫೋಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದ್ದೂರಿ ಹಬ್ಬ ಆಚರಣೆಗೆ ಕರ್ನಾಟಕ ಸರ್ಕಾರ ಬ್ರೇಕ್ ಹಾಕಿದೆ.
ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೇ ಮುಂತಾದ ಎಲ್ಲಾ ಹಬ್ಬಗಳನ್ನು ಸಾರ್ವಜನಿಕ ಸ್ಥಳ, ಮೈದಾನ, ಸಾರ್ವಜನಿಕ ಪಾರ್ಕ್, ಮಾರ್ಕೆಟ್ ಮತ್ತು ಪ್ರಾರ್ಥನಾ ಮಂದಿರಗಳಲ್ಲಿ ಆಚರಿಸುವುದಕ್ಕೆ ನಿಷೇಧ ಹೇರಲಾಗಿದೆ.
ಹಬ್ಬ ಆಚರಣೆ ಸಲುವಾಗಿ ಗುಂಪು ಸೇರುವಿಕೆಗೆ ನಿಷೇಧ ಹೇರಲಾಗಿದ್ದು, ನಿಯಮ ಉಲ್ಲಂಘಿಸಿದರೆ ರಾಜ್ಯ ವಿಪತ್ತು ನಿರ್ವಹಣಾ ಕಾಯ್ದೆ(ಎಸ್‌ಡಿಎಂಎ) ಅಡಿ ಕೇಸ್ ದಾಖಲಾಗಿಸಲಾಗುವುದು ಎಚ್ಚರಿಕೆ ನೀಡಲಾಗಿದೆ.
ಬಿಬಿಎಂಪಿ ಆಯುಕ್ತರು, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿ ಪರಿಸ್ಥಿತಿ ನಿಭಾಯಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.