ಬೆಂಗಳೂರು: ಯುವತಿ ವೀಡಿಯೋ ಸಂದೇಶದ ಮೂಲಕ ಹೇಳಿಕೆ ಬಿಡುಗಡೆ ಮಾಡಿರುವುದು ಷಡ್ಯಂತ್ರದ ಒಂದು ಭಾಗ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಯುವತಿಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದಾರೆ.
Advertisement
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ದೂರು ನೀಡುತ್ತಿದ್ದಂತೆ, ಪೊಲೀಸರು ಎಫ್‍ಐಆರ್ ದಾಖಲಿಸಿದ್ದು, ಇದರ ಬೆನ್ನಲ್ಲೇ ಯುವತಿ ವೀಡಿಯೋ ಸಂದೇಶದ ಮೂಲಕ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾಳೆ. ಈ ಕುರಿತು ಪ್ರತಿಕ್ರಿಯೆ ನೀಡಲು ಒಪ್ಪದ ಸಚಿವರು, ವೀಡಿಯೋ ಬಿಡುಗಡೆಯಾಗಿ 12 ದಿನ ಆಯಿತು. ಇಂದೇ ಏಕೆ ಯುವತಿ ಮಾತನಾಡಿದಳು? ಇದು ಷಡ್ಯಂತ್ರದ ಒಂದು ಭಾಗವಷ್ಟೇ. ಇದರಿಂದ ಯುವತಿ ಎಷ್ಟು ಕೈಗೊಂಬೆ ಆಗಿದ್ದಾಳೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.
Advertisement
Advertisement
ವೀಡಿಯೋ ಸಂದೇಶವನ್ನು ಬಿಡುಗಡೆ ಮಾಡಿರುವ ಯುವತಿ, ನನಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಂಚಿಸಿದ್ದಾರೆ ಎಂದು ಸಿಡಿ ವೀಡಿಯೋದ ಯುವತಿ ಹೇಳಿದ್ದಾಳೆ.. ಇಂದು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಂತ್ರಸ್ತೆ, ನನಗೆ ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲ. ರಮೇಶ್ ಜಾರಕಿಹೊಳಿ ವೀಡಿಯೋ ರಿಲೀಸ್ ಮಾಡಿದ್ದಾರೆ. ಈ ವೀಡಿಯೋದಿಂದ ನನ್ನ ಮಾನ ಹರಾಜಾಗಿದೆ. ನನಗೆ ಕೆಲಸ ಕೊಡಿಸೋದಾಗಿ ನಂಬಿಸಿ ಜಾರಕಿಹೊಳಿ ವಂಚಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾಳೆ.
Advertisement
ನನ್ನ ತಂದೆ, ತಾಯಿ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನು ಕೂಡ ಹಲವಾರು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ. ನನಗೆ, ನನ್ನ ಕುಟುಂಬಕ್ಕೆ ರಕ್ಷಣೆ ಕೊಡಿ. ವಿಡಿಯೋ ಹೇಗೆ ಮಾಡಿದ್ದು ಅಂತಾ ನನಗೆ ಗೊತ್ತಿಲ್ಲ ಎಂದು ಯುವತಿ ಹೇಳಿದ್ದಾಳೆ.