ಚೆನ್ನೈ: ತಮಿಳು ನಟ ಆರ್ಯ ಹಾಗೂ ‘ಯುವರತ್ನ’ ನಾಯಕಿ ಸಯ್ಯೇಶಾ ದಂಪತಿಗೆ ಹೆಣ್ಣು ಮಗು ಜನಿಸಿದೆ.
ಹೌದು. ಸಯ್ಯೇಶಾ ಅವರು ನಿನ್ನೆ ಹೆಣ್ಣು ಮಗುವಿಗೆ ಜನ್ಮವಿತ್ತಿದ್ದು, ಈ ಕುರಿತು ನಟ ವಿಶಾಲ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ತಾಯಿ- ಮಗು ಆರೋಗ್ಯವಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ವಿಶಾಲ್ ಟ್ವೀಟ್ ಮಾಡುತ್ತಿದ್ದಂತೆಯೇ ಆರ್ಯ ಹಾಗೂ ಸಯ್ಯೇಶಾ ಅಭಿಮಾನಿಗಳಿಂದ ಶುಭಹಾರೈಕೆಯ ಸುರಿಮಳೆಯೇ ಬರತೊಡಗಿದೆ.
So Happy to break this news,great to be an Uncle,my Bro Jammy & Sayyeshaa r blessed wit a #BabyGirl,uncontrollable emotions rite now in midst of shoot.Always wish de best 4 dem,Inshallah,GB de new Born,my Baby Girl @sayyeshaa & @arya_offl for taking a new responsibility as a Dad
— Vishal (@VishalKOfficial) July 23, 2021
2019ರ ಮಾರ್ಚ್ ನಲ್ಲಿ ಆರ್ಯ ಹಾಗೂ ಸಯ್ಯೇಶಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಹೈದರಾಬಾದ್‍ನ ತಾಜ್ ಫುಕ್ನಮ್ ಪ್ಯಾಲೇಸ್ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆ ಸಮಾರಂಭ ನಡೆದಿತ್ತು. ಇವರ ಮದುವೆಯಲ್ಲಿ ಬಾಲಿವುಡ್ ಮತ್ತು ಕಾಲಿವುಡ್‍ನ ಖ್ಯಾತ ನಟ ನಟಿಯರು ಪಾಲ್ಗೊಂಡು ನವ ಜೋಡಿಗಳಿಗೆ ಶುಭಾಶಯ ತಿಳಿಸಿದ್ದರು.
ಇದಕ್ಕೂ ಮುನ್ನ ಆರ್ಯ ಅವರು ಪ್ರೇಮಿಗಳ ದಿನಾಚರಣೆಯ ದಿನವೇ ತಮ್ಮ ಮದುವೆಯಾಗುವ ಹುಡುಗಿ ಹಾಗೂ ವಿವಾಹದ ಬಗ್ಗೆ ತಿಳಿಸಿದ್ದರು. 2018 ರ ‘ಘಜಿನಿಕಾಂತ್’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಸಯ್ಯೇಶಾ ಅವರು ಆರ್ಯರನ್ನು ಭೇಟಿಯಾಗಿದ್ದು, ಅಂದಿನಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಎರಡೂ ಕುಟುಂಬಗಳ ಒಪ್ಪಿಗೆ ಸೂಚಿಸಿದ್ದರು.
ಸಯ್ಯೇಶಾ ಅವರು ನಟ-ನಿರ್ಮಾಪಕ ಸುಮೇತ್ ಸೈಗಲ್ ಮತ್ತು ನಟಿ ಶಹೀನ್ ಬಾನು ಅವರ ಮಗಳಾಗಿದ್ದು, ಶಹೀನ್ ಅವರು ‘ಮಹಾ-ಸಂಗ್ರಮ್’ ಮತ್ತು ‘ಆಯಿ ಮಿಲಾನ್ ಕಿ ರಾತ್’ ನಂತಹ ಸಿನಿಮಾದಲ್ಲಿ ಹೆಸರುವಾಸಿಯಾಗಿದ್ದಾರೆ. ಸಯ್ಯೇಶಾ ಅವರು ನಟ ಪುನೀತ್ ರಾಜ್ ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದ ಮೂಲಕ ಸ್ಯಾಂಡಲ್‍ವುಡ್‍ನಲ್ಲಿಯೂ ನಟಿಸಿದ್ದಾರೆ. ಇದನ್ನೂ ಓದಿ: ಕೆಜಿಎಫ್ 2 ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಪಡೆಯಲಿರುವ ವಿಶೇಷ ಅಭಿಮಾನಿ