ಬೆಂಗಳೂರು: ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.
ರಾಷ್ಟ್ರಿಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಸೇರಿ ಒಟ್ಟು 17 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಎಫ್‍ಐಆರ್ 188 ಹಾಗೂ ಎನ್.ಡಿ.ಎಂ.ಎ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ.
Advertisement
Advertisement
ಜುಲೈ 12 ರಂದು ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಅನುಮತಿಯನ್ನ ಕೇಳಿದ್ದರಾದ್ರೂ ಕೋವಿಡ್ ನಿಯಮದಂತೆ ಅನುಮತಿ ನಿರಾಕರಿಸಲಾಗಿತ್ತು. ಅದಾಗ್ಯೂ ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು.
Advertisement
Advertisement
ರಕ್ಷಾರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಗೆ ಯಾವುದೇ ಅನುಮತಿ ಪಡೆಯದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳದೇ, ಸರ್ಕಾರದ ಕೊರೋನಾ ಲಾಕ್ ಡೌನ್ ನಿಯಮಾವಳಿಗಳನ್ನ ಉಲ್ಲಂಘಿಸಲಾಗಿದೆ ಎಂದು ಎಫ್.ಐ.ಆರ್ ನಲ್ಲಿ ಉಲ್ಲೇಖಿಸಿಲಾಗಿದೆ.