– ಯೋಗ ಯಾವುದೇ ದೇಶ-ಧರ್ಮಕ್ಕೆ ಸೀಮಿತವಲ್ಲ
ಬೆಂಗಳೂರು: ಮನುಕುಲದ ಮಾನಸಿಕ ದೈಹಿಕ ಸದೃಢತೆಗಾಗಿ ಹಿರಿಯರು ಕೊಟ್ಟು ಹೋಗಿರುವ ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ ಎಂದು ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
Advertisement
ಮಾಧ್ಯಮದವರೊಂದಿಗೆ ಮಾತನಡಿದ ಅವರು, ಯೋಗ ಶಿಕ್ಷಣವನ್ನು ರಾಜ್ಯದ ಪಠ್ಯಕ್ರಮದಲ್ಲಿ ಸೇರಿಸಲಾಗುವುದು. ಉನ್ನತ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಗಾಳಿ-ಮಳೆಗೆ ಉರುಳುತ್ತಿರುವ ಮರಗಳ ರಕ್ಷಣೆಗೆ ಸರ್ಕಾರದ ಹೊಸ ಪ್ಲ್ಯಾನ್
Advertisement
#Yoga is way of life that lights up good things that never dim. Better your practice, brighter the flame.
Some glimpses of the #YogaDay2021 held at Kanteerava Stadium, Bengaluru. pic.twitter.com/OQXnjaVR2a
— Dr. Ashwathnarayan C. N. (@drashwathcn) June 21, 2021
Advertisement
ಮನುಕುಲದ ಮಾನಸಿಕ ದೈಹಿಕ ಸದೃಢತೆಗಾಗಿ ಹಿರಿಯರು ಕೊಟ್ಟು ಹೋಗಿರುವ ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ. ಮಕ್ಕಳ ಏಕಾಗ್ರತೆ ಮತ್ತು ಬೆಳವಣಿಗೆಗೆ ಇದು ಅತಿ ಹೆಚ್ಚು ಪರಿಣಾಮಕಾರಿಯಾಗಿದೆ.ಈ ವರ್ಷದಿಂದಲೇ ಜಾರಿಗೆ ಬರುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗವನ್ನು ಪಠ್ಯವನ್ನಾಗಿ ಅಳವಡಿಸುವ ಅಂಶವಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ವಹಿಸಿದೆ. ಮಕ್ಕಳು ಆರಂಭದಿಂದಲೇ ಶೈಕ್ಷಣಿಕವಾಗಿ ಬೆಳವಣಿಗೆ ಸಾಧಿಸುವುದರ ಜೊತೆಗೆ ಯೋಗದ ಮೂಲಕ ದೈಹಿಕ-ಮಾನಸಿಕವಾಗಿ ಸದೃಢರಾಗಲಿದ್ದಾರೆ ಎಂದು ಡಿಸಿಎಂ ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ರಾಜ್ಯ ಒಲಿಂಪಿಕ್ ಸಂಸ್ಥೆ ಅಧ್ಯಕ್ಷರೂ ಆದ ಶಾಸಕ ಗೋವಿಂದರಾಜು ಅವರು ಯೋಗವನ್ನು ಶಿಕ್ಷಣದ ಪಠ್ಯದಲ್ಲಿ ಸೇರಿಸಬೇಕೆಂದು ಮನವಿ ಮಾಡಿದರು. ಅದಕ್ಕೆ ಡಿಸಿಎಂ ಸ್ಪಂದಿಸಿ ಈ ಪ್ರತಿಕ್ರಿಯೆ ನೀಡಿದರು.
Advertisement
ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ:
ಯೋಗ ದಿನಾಚರಣೆಗೆ ಸಾನ್ನಿಧ್ಯ ವಹಿಸಿ ಆಸೀರ್ವಚನ ನೀಡಿದ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರು, ಯೋಗವು ಯಾವುದೇ ದೇಶ, ಜಾತಿ, ಧರ್ಮಕ್ಕೆ ಸೀಮಿತವಾದುದ್ದಲ್ಲ. ಇದು ಮನುಷ್ಯನ ಅಸ್ತಿತ್ವಕ್ಕೆ ಸೇರಿರುವಂಥದ್ದು. ಮನುಷ್ಯನನ್ನು ಉಚ್ಛ್ರಾಯ ಸ್ಥಿತಿಗೆ ಕೊಂಡೊಯ್ಯಲು ನಮ್ಮ ಹಿರಿಯರು ಸಂಶೋಧಿಸಿದ ವಿಜ್ಞಾನವೇ ಯೋಗ ಎಂದು ನುಡಿದರು.
ಎಲ್ಲರ ಕ್ಷೇಮ, ಉತ್ತಮ ಆರೋಗ್ಯಕ್ಕಾಗಿ ಯೋಗ!
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ. ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಹಾಗೂ ಹರಿಹರ ಪಂಚಮಸಾಲಿ ಮಠದ ಜಗದ್ಗುರು, ಯೋಗಿ ಶ್ರೀ ವಚನಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ #YogaDay2021 ಆಚರಿಸಲಾಯಿತು.#InternationalDayOfYoga #YogaForWellness pic.twitter.com/qkPQPGymYb
— Dr. Ashwathnarayan C. N. (@drashwathcn) June 21, 2021
ಯೋಗ ಭಾರತಕ್ಕೆ ಸೇರಿದ್ದು ಎಂದು ಜಗತ್ತು ಅದನ್ನು ಬಳಸದೇ ಇರಬಾರದು. ಹಾಗೆ ಮಾಡಿದರೆ ಜಗತ್ತಿಗೇ ನಷ್ಟ. ಯುರೋಪಿಯನ್ ವಿಜ್ಞಾನಿ ಲಾವಾಶಿಯರ್ ಅವರು ಆಮ್ಲಜನಕವನ್ನು ಸಂಶೋಧಿಸಿದರು ಎಂಬ ಕಾರಣಕ್ಕೆ ನಾವು ಅದನ್ನು ಬಳಸದೇ ಇದ್ದರೆ ನಮಗೇ ನಷ್ಟ. ಹಾಗೆಯ ಯೋಗವೂ ಕೂಡ. ಯೋಗ ಜಗತ್ತಿನ ಪ್ರತಿಯೊಬ್ಬರ ಜೀವನ ಶೈಲಿ ಆಗಬೇಕು ಎಂದು ಸ್ವಾಮೀಜಿ ಅವರು ಆಶಯ ವ್ಯಕ್ತಪಡಿಸಿದರು.
ವಚನಾನಂದ ಶ್ರೀಗಳಿಂದ ಯೋಗ ಮಾರ್ಗದರ್ಶನ:
ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅವರು ಈ ಸಂದರ್ಭದಲ್ಲಿ ಯೋಗ ಮಾರ್ಗದರ್ಶನ ನೀಡಿದರು. ಯೋಗ ಪಟುಗಳಿಂದ ಶ್ರೀಗಳವರು ‘ಕಟ್ಟಿ ಚಕ್ರಾಸನ’, ‘ತ್ರಿಕೋನಾಸನ’, ‘ಊಧ್ರ್ವ ತಾಡಾಸನ’, ‘ಪಾದ ಹಸ್ತಾಸನ’, ‘ಉಸ್ಟ್ರಾಸನ’, ‘ಶಶಾಂಕಾಸನ’, ‘ಮಂಡೂಕಾಸನ’, ‘ಮಕರಾಸನ’, ‘ಭುಜಂಗಾಸನ’, ‘ಬಾಲ ಕ್ರೀಡಾಸನ’, ‘ಶಲ್ಬಾಸನ’, ‘ಉತ್ಥಾನ ಪಾದಾಸನ’, ‘ಅರ್ಧಪವನ ಮುಕ್ತಾಸನ’, ‘ಪವನ ಮುಕ್ತಾಸನ’ ಜತೆಗೆ, ‘ಕಪಾಲಬಾತಿ’, ‘ಪ್ರಾಣಯಾಮ’, ‘ನಾಡಿ ಶೋಧನ’, ‘ಶೀಥಲಿ ಪ್ರಾಣಯಾಮ’, ‘ಭ್ರಾಮರಿ ಪ್ರಾಣಯಾಮ’ ಮಾಡಿಸಿದರು.
Watch LIVE: #InternationalDayOfYoga event on Vijayibhava YouTube Channel.
????️ https://t.co/LJ0fecXzFE#YogaDay2021 #YogaForWellness pic.twitter.com/eDceF6ZBDE
— Dr. Ashwathnarayan C. N. (@drashwathcn) June 21, 2021
ಕ್ರೀಡಾ ಮತ್ತು ಯವಜನ ಸಬಲೀಕರಣ ಖಾತೆ ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಪ್ರಭಾಕರ್, ಯುವಜನ ಸೇವೆ ಇಲಾಖೆ ಆಯುಕ್ತ ಗೋಪಾಲಕೃಷ್ಣ ಮುಂತಾದವರು ಉಪಸ್ಥಿತರಿದ್ದರು.