ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು, ಆದರೂ ಇಲ್ಲ ಬಿಡುಗಡೆ ಭಾಗ್ಯ

Public TV
1 Min Read
Vinay Kulakarni

ನವದೆಹಲಿ: ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಇಂದು ಷರತ್ತು ಬದ್ಧ ಜಾಮೀನು ನೀಡಿದೆ.

ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಯು.ಯು ಲಲಿತ್ ನೇತೃತ್ವದ ದ್ವಿ ಸದಸ್ಯ ಪೀಠ, ಜಾಮೀನು ನೀಡಿದೆ. ವಿಚಾರಣೆ ವೇಳೆ ಜಾಮೀನು ನೀಡದಂತೆ ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಆಕ್ಷೇಪ ವ್ಯಕ್ತಪಡಿಸಿತು.

Supreme Court

ವಿನಯ್ ಕುಲಕರ್ಣಿ ಇಡೀ ಪ್ರಕರಣದ ಪ್ರಮುಖ ಆರೋಪಿ, ಇವರು ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದರು. ನಕಲಿ ಆರೋಪಿಗಳನ್ನು ಸೃಷ್ಟಿಸಿ ಭೂ ವೈಷಮ್ಯಕ್ಕಾಗಿ ಕೊಲೆ ನಡೆದಿದೆ ಎನ್ನುವಂತೆ ಬಿಂಬಿಸಲಾಗಿತ್ತು. ಕೊಲೆ ಆರೋಪಿಗಳಿಗೆ ವಿನಯ್ ಕುಲಕರ್ಣಿ ಹೋಟೆಲ್ ನಲ್ಲಿ ತಂಗಲು ವ್ಯವಸ್ಥೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ತನಿಖೆಯ ಹಂತದಲ್ಲಿ ಜಾಮೀನು ನೀಡಿದಲ್ಲಿ ವಿನಯ್ ಕುಲಕರ್ಣಿ ಸಾಕ್ಷ್ಯ ನಾಶ ಮಾಡಬಹುದು, ವಿಚಾರಣೆಗೆ ಸಹಕರಿಸದಿರಬಹದು ಎಂದು ಸಿಬಿಐ ಪರ ವಕೀಲ ಎಎಸ್‍ಜಿ ಎಸ್.ವಿ. ರಾಜು ವಾದ ಮಂಡಿಸಿದರು. ರಾಜ್ಯ ಸರ್ಕಾರದ ಪರವಾಗಿ ಎಎಸ್‍ಜಿ ವಾದ ಮಂಡಿಸಿದರು.

VINAY KULAKARNI

ವಿಚಾರಣೆ ಬಳಿಕ ಸುಪ್ರೀಂಕೋರ್ಟ್ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಧಾರವಾಡಕ್ಕೆ ಬಾರದಿರುವಂತೆ ಸೂಚನೆ ನೀಡಿದ್ದು, ವಿಚಾರಣೆಗೆ ಅಧಿಕಾರಿಗಳು ಕರೆದಾಗ ಬರಬೇಕು ಮತ್ತು ಸಹಕರಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Vinay Kulakarni 1

ಜಾಮೀನು ಸಿಕ್ಕರೂ ವಿನಯ್ ಬಿಡುಗಡೆ ಅನುಮಾನ ಎನ್ನಲಾಗಿದೆ, ಮುಖ್ಯ ಪ್ರಕರಣದಲ್ಲಿ ಮಾತ್ರ ಇಂದು ಜಾಮೀನು ಸಿಕ್ಕಿದ್ದು, ವಿನಯ್ ಕುಲಕರ್ಣಿಯ ವಿರುದ್ಧ ಸಾಕ್ಷ್ಯ ನಾಶ ಮಾಡಿದ ಆರೋಪದ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು. ಈ ಕೇಸ್ ಇತ್ಯರ್ಥವಾಗುವವರೆಗೂ ಜೈಲಿನಿಂದ ಹೊರಬರುವುದು ಅನುಮಾನ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *