ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೂವರೆಗೂ ಯುವತಿ ನನಗೆ ಗೊತ್ತೆ ಇಲ್ಲ ಎಂದು ಹೇಳುತ್ತಿದ್ದ ರಮೇಶ್ ಜಾರಕಿ ಹೊಳಿ ಆ ಯುವತಿ ನನಗೆ ಗೊತ್ತು ಅಂತ ಹೇಳಿದ್ದಾರೆ ಎನ್ನಲಾಗುತ್ತಿದೆ.
ಆ ಯುವತಿ ಪ್ರಾಜೆಕ್ಟ್ ವಿಚಾರದಲ್ಲಿ ನನಗೆ ಪರಿಚಯ ಆಗಿದ್ದು ನಿಜ. ಅವಾಗಾವಾಗ ನಾನು ವಾಸವಾಗಿದ್ದ ಅಪಾರ್ಟ್ ಮೆಂಟ್ ಗೆ ಬರುತ್ತಿದ್ದಳು. ಅವಾಗ ಇಬ್ಬರು ಲೈಂಗಿಕ ಸಂಪರ್ಕದಲ್ಲಿ ಭಾಗಿಯಾಗಿದ್ದೀವಿ. ಅದು ಕೂಡ ಆಕೆಯ ಸಮ್ಮತಿಯ ಮೇರೆಗೆ ಎಂದು ಎಸ್‍ಐಟಿ ಮುಂದೆ ರಮೇಶ್ ಜಾರಕಿಹೊಳಿ ಹೇಳಿಕೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಯುವತಿ ಸಮ್ಮತಿಯ ಮೇರೆಗೆ ಲೈಂಗಿಕ ಸಂಪರ್ಕದಲ್ಲಿ ಭಾಗಿಯಾಗಿದ್ದು, ಬಳಿಕ ಆಕೆಯೇ ವಿಡಿಯೋ ಮಾಡಿಕೊಂಡು ಈ ರೀತಿ ನಡೆದುಕೊಳ್ಳುತ್ತಾ ಇದ್ದಾಳೆ ಅನ್ನೋ ಮಾಹಿತಿ ಬೆಳಕಿಗೆ ಬಂದಿದೆ.
ಈ ಮಾಹಿತಿಯನ್ನು ಎಸ್‍ಐಟಿ ಅಧಿಕಾರಿಗಳು ಅಲ್ಲಗೆಳೆದಿದ್ದು, ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಯಾವುದೇ ಬೆಳವಣಿಗೆಯೂ ನಡೆದಿಲ್ಲ. ತನಿಖೆಯ ಬಳಿಕ ಸಂಪೂರ್ಣ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ ಅಂತ ಈ ಸುದ್ದಿಗೆ ಎಸ್‍ಐಟಿ ಮೂಲಗಳು ಸ್ಪಷ್ಟಪಡಿಸಿವೆ.