ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅತ್ಯಾಚಾರ ಪ್ರಕರಣ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಎಸ್ ಐಟಿ ಅಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಕೆ ಮಾಡ್ತಾರೆ ಅಂದುಕೊಳ್ಳಲಾಗಿತ್ತು. ಆದರೆ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆಯುತ್ತಾ ಇದೆ. ಇಂದು ಯುವತಿಯ ಕಡೆಯಿಂದ ಹೈಕೋರ್ಟಿಗೆ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಲಾಯಿತು.
ಎಸ್ ಐಟಿ ಅಧಿಕಾರಿಗಳು ನೀಡಿದ್ದ ಪ್ರಗತಿ ವರದಿ ವಿಚಾರಣಾ ಸಂದರ್ಭದಲ್ಲಿ ಯುವತಿ ಪರ ವಕೀಲರು ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದರು. ಈಗಾಗಲೇ ಎಸ್‍ಐಟಿ ತನಿಖೆ ಮಾಡದಂತೆ ತಡೆಯಾಜ್ಞೆಗೆ ಅರ್ಜಿ ಸಲ್ಲಿಸಲಾಗಿದೆ. ಈಗಾಗಲೇ ಮುಖ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಾ ಇರುವುದರಿಂದ ಈ ಪೀಠದಲ್ಲಿ ನಮ್ಮನ್ನೂ ಪ್ರತಿವಾದಿಯಾಗಿಸಿ ಅಂತ ಯುವತಿ ಪರ ವಕೀಲರು ಅರ್ಜಿ ಸಲ್ಲಿಕೆ ಮಾಡಿದ್ರು.
ಅರ್ಜಿ ಪರಿಗಣನೆ ಮಾಡಿದ ಹೈಕೋರ್ಟ್ ಮುಖ್ಯ ಪೀಠ ಮುಂದಿನ ವಾರ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿತ್ತು. ಜೂನ್ 23 ಕ್ಕೆ ಎಸ್ ಐಟಿ ತನಿಖಾ ಪ್ರಗತಿ ವರದಿ ಸಲ್ಲಿಕೆ ಮಾಡಲು ಸೂಚನೆ ನೀಡಿದೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ, ಎಸ್‍ಐಟಿಗೆ ಹೈಕೋರ್ಟ್ ತುರ್ತು ನೋಟಿಸ್