ರಮೇಶ್ ಜಾರಕಿಹೊಳಿ ಸಿ.ಡಿ. ಕೇಸ್ ತನಿಖೆಗೆ SIT

Public TV
1 Min Read
ramesh jarkiholi 9

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‍ಐಟಿ)ಕ್ಕೆ ಒಪ್ಪಿಸಲಾಗಿದೆ. ಐಜಿಪಿ ಸೌಮೇಂದು ಮುಖರ್ಜಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಎಸ್‍ಐಟಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

IGP 1

ಸಿ.ಡಿ. ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಪತ್ರ ಬರೆದಿದ್ದು, ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶದಿಂದ ಈ ಷಡ್ಯಂತ್ರ ರೂಪಿಸಲಾಗಿದೆ ಎಂದು ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಈ ವಿಶೇಷ ತನಿಖಾ ತಂಡವನ್ನು ರಚಿಸಿ ಅದರ ನೇತೃತ್ವವನ್ನು ಸೌಮೇಂದು ಮುಖರ್ಜಿ ಅವರಿಗೆ ನೀಡಲಾಗಿದೆ. ಎಸ್‍ಐಟಿ ತಂಡ ವಿಚಾರಣೆ ನಡೆಸಿ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಬೊಮ್ಮಾಯಿ ಅವರು ಸೂಚಿಸಿದ್ದಾರೆ.

 

BOMMAI

ಬೊಮ್ಮಾಯಿ ಪತ್ರದಲ್ಲೇನಿದೆ.?
ದಿನಾಂಕ 9-3-2021 ರಂದು ಮಾಜಿ ಮಂತ್ರಿಗಳಾದ ಶ್ರೀ ರಮೇಶ್ ಲ ಜಾರಕಿಹೊಳಿರವರು ನನಗೆ ಪತ್ರ ಬರೆದು, ಅವರ ವಿರುದ್ಧ ದಿನಾಂಕ 2-3-2021ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಒಂದು ಅರ್ಜಿ ನೀಡಿದ್ದು, ಅದರಲ್ಲಿ ಅವರ ವಿರುದ್ಧ ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶವಿದ್ದು ಇದರಲ್ಲಿ ಹಲವಾರು ಜನ ಸೇರಿ ಷಡ್ಯಂತ್ರ ರೂಪಿಸಿರುವಂಥದ್ದು ಬಹಳ ಸ್ಪಷ್ಟವಾಗಿರುತ್ತದೆ ಎಂದು ತಿಳಿಸಿರುತ್ತಾರೆ.

LETTER

ಈ ಹಿನ್ನೆಲೆಯಲ್ಲಿ ಈ ಷಡ್ಯಂತ್ರವನ್ನು ರೂಪಿಸಿರುವ ಹಾಗೂ ಇದರ ಹಿಂದಿರುವ ವ್ಯಕ್ತಿಗಳ ಬಗ್ಗೆ ಕೂಲಂಕುಶವಾಗಿ ವಿಚಾರಣೆ ಯನ್ನು ಮಾಡಲು ಒಂದು ವಿಶೇಷ ತನಿಖಾ ತಂಡವನ್ನು ರಚನೆ ಮಾಡಲು ಹಾಗೂ ಅದರ ನೇತೃತ್ವವನ್ನು ಶ್ರೀ ಸೌಮೇಂದು ಮುಖರ್ಜಿ, ಐಜಿಪಿ ಇವರಿಗೆ ವಹಿಸುವುದು ಮತ್ತು ಈ ಬಗ್ಗೆ ಸಂಪೂರ್ಣ ವರದಿಯನ್ನು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ನೀಡುವಂತೆ ಸೂಚಿಸಿದೆ.

Share This Article
Leave a Comment

Leave a Reply

Your email address will not be published. Required fields are marked *