ಬೆಂಗಳೂರು: ರವಿ.ಡಿ.ಚನ್ನಣ್ಣನವರ್, ಮೈಸೂರು ಎಸ್‍ಪಿ ಸೇರಿ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿಯಾಗಿದ್ದ ರವಿ.ಡಿ.ಚನ್ನಣ್ಣನವರ್ ಅವರನ್ನು ಸಿಐಡಿ ಎಸ್‍ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಉಡುಪಿಯಲ್ಲಿ ಕರಾವಳಿ ಭದ್ರತಾ ಪೊಲೀಸ್ ಪಡೆಯ ಎಸ್‍ಪಿಯಾಗಿದ್ದ ಆರ್.ಚೇತನ್ ಅವರನ್ನು ಮೈಸೂರು ಎಸ್‍ಪಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ.
Advertisement
Advertisement
ಕೋಲಾರ ಎಸ್‍ಪಿಯಾಗಿದ್ದ ಕಾರ್ತಿಕ್ ರೆಡ್ಡಿಯವರನ್ನು ಬೆಂಗಳೂರಿನ ವೈರ್‍ಲೆಸ್ ವಿಭಾಗಕ್ಕೆ, ಸಿಐಡಿ ಎಸ್‍ಪಿಯಾಗಿದ್ದ ರಾಹುಲ್ ಕುಮಾರ್ ಶಹಪೂರ್‍ವಾಡ್ ಅವರನ್ನು ತುಮಕೂರು ಎಸ್‍ಪಿಯಾಗಿ ವರ್ಗಾಯಿಸಲಾಗಿದೆ.
Advertisement
ದಾವಣಗೆರೆ ಎಸ್‍ಪಿಯಾಗಿದ್ದ ಹನುಮಂತರಾಯ ಅವರನ್ನು ಹಾವೇರಿ ಎಸ್‍ಪಿಯಾಗಿ, ಮೈಸೂರಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಪ್ರಕಾಶ್ ಗೌಡ ಅವರನ್ನು ಆಂತರಿಕ ಭದ್ರತಾ ಪಡೆ ಎಸ್‍ಪಿಯಾಗಿ ಹಾಗೂ ಹಾವೇರಿ ಎಸ್‍ಪಿಯಾಗಿದ್ದ ಕೆ.ಜಿ.ದೇವರಾಜು ಅವರನ್ನು ಸಿಐಡಿ ಎಸ್‍ಪಿಯಾಗಿ ಬೆಂಗಳೂರಿಗೆ ವರ್ಗಾಯಿಸಲಾಗಿದೆ.
Advertisement
ಮೈಸೂರು ಎಸ್‍ಪಿಯಾಗಿದ್ದ ಸಿ.ಬಿ.ರಿಷ್ಯಂತ್ ಅವರನ್ನು ದಾವಣಗೆರೆ ಎಸ್‍ಪಿಯಾಗಿ, ಕಲಬುರಗಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ದೆಕ್ಕಾ ಕಿಶೋರ್ ಬಾಬು ಅವರನ್ನು ಕೋಲಾರ ಎಸ್‍ಪಿಯಾಗಿ, ತುಮಕೂರು ಎಸ್‍ಪಿಯಾಗಿದ್ದ ಕೋನ ವಂಶಿ ಕೃಷ್ಣ ಅವರನ್ನು ಬೆಂಗಳೂರು ಗ್ರಾಮಾಂತರ ಎಸ್‍ಪಿಯಾಗಿ, ಬೆಂಗಳೂರಿನ ಆಂತರಿಕ ಭದ್ರತಾ ಪಡೆಯ ಎಸ್‍ಪಿಯಾಗಿದ್ದ ಪ್ರದೀಪ್ ಗುಂಟಿ ಅವರನ್ನು ಮೈಸೂರಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ, ಬೆಂಗಳೂರಿನ ವೈರ್‍ಲೆಸ್ ವಿಭಾಗದ ಎಸ್‍ಪಿಯಾಗಿದ್ದ ಅದ್ದೂರು ಶ್ರೀನಿವಾಸುಲು ಅವರನ್ನು ಕಲಬುರಗಿಯ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.