ಬೆಂಗಳೂರು: ಐಪಿಎಸ್ ಅಧಿಕಾರಿ ರವಿ.ಡಿ ಚನ್ನಣ್ಣನವರ್ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿರುವ ರವಿ ಡಿ. ಚನ್ನಣ್ಣವನರ್ ಅವರು ನಿನ್ನೆ ಕೊರೊನಾ ಪರೀಕ್ಷೆ ಮಡಿಸಿಕೊಂಡಿದ್ದರು. ವರದಿಯಲ್ಲಿ ಸೋಂಕು ಇರುವುದು ದೃಢವಾಗಿದೆ.
ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಎಸ್‍ಪಿ ಸೇರಿದಂತೆ ಅವರ ಜೊತೆಯಲ್ಲಿದ್ದ ಸಿಬ್ಬಂದಿ ಐಸೋಲೇಷನ್‍ಗೆ ಒಳಗಾಗಿದ್ದಾರೆ. ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಜಾಗೃತಿವಹಿಸಿ ಎಂದು ರವಿ.ಡಿ ಚನ್ನಣ್ಣನವರ್ ಮನವಿ ಮಾಡಿದ್ದಾರೆ.