– ಚಿಂತಾಜನಕ ಸ್ಥಿತಿಯಲ್ಲಿ ನಟ
ಬೆಂಗಳೂರು: ರಸ್ತೆ ಅಪಘಾತದಲ್ಲಿ ನಟ ಸಂಚಾರಿ ವಿಜಯ್ ಗಾಯಗೊಂಡಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಬೈಕ್ ನಲ್ಲಿ ಸ್ನೇಹಿತರ ಜೊತೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಜಯ್ ಅವರ ಮೆದುಳಿನ ಬಲಭಾಗ ಹಾಗೂ ಬಲ ತೊಡೆಗೆ ಗಂಭೀರ ಗಾಯಗಳಾಗಿವೆ. ಅಪಘಾತದ ತೀವ್ರತೆಗೆ ತೊಡೆಯ ಭಾಗ ಮುರಿದು, ತೀವ್ರ ರಕ್ತಸ್ರಾವವಾಗಿದೆ ಎಂದು ತಿಳಿದು ಬಂದಿದೆ. ವಿಜಯ್ ಆರೋಗ್ಯ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಂಚಾರಿ ವಿಜಯ್ ನಾನು ಅವಳಲ್ಲ ಸಿನಿಮಾ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ನಾತಿಚರಾಮಿ, ಜಂಟಲ್‍ಮೆನ್, ಆಕ್ಟ್ 1978, ಕೃಷ್ಣ ತುಳಸಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.