ಬೆಂಗಳೂರು: ಸದ್ಯ ಆರೋಗ್ಯ ಸಮಸ್ಯೆ ನಟಿ ರಾಗಿಣಿ ದ್ವಿವೇದಿಯನ್ನು ಕಾಡುತ್ತಿದ್ದು, ಚೇತರಿಕೆ ನಂತರ ಸುದ್ದಿಗೋಷ್ಠಿ ನಡೆಸುತ್ತಾರೆ ಎಂದು ತಂದೆ ರಾಕೇಶ್ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಗಿಣಿಗೆ ಬೆನ್ನು ನೋವು ಮತ್ತು ಆರೋಗ್ಯ ಸಮಸ್ಯೆ ಕಾಡುತ್ತಿದೆ. ಹಾಗಾಗಿ ಮನೆಯಲ್ಲಿಯೇ ಅವರು ರೆಸ್ಟ್ ಮಾಡುತ್ತಿದ್ದಾರೆ ಎಂದು ಹೇಳಿದರು.
ಮೊದಲು ವೈದ್ಯರನ್ನು ಭೇಟಿ ಮಾಡಿ ರಾಗಿಣಿ ಚಿಕಿತ್ಸೆ ಪಡೆಯಬೇಕಿದೆ. ಎರಡು ಮೂರು ದಿನಗಳ ನಂತರ ವಕೀಲರ ಜೊತೆ ಮಾತುಕತೆ ನಡೆಸಬೇಕಾಗಿದೆ. ವಕೀಲರು ಮತ್ತು ವೈದ್ಯರ ಸಲಹೆ ಮೇರೆಗೆ ನಂತರ ರಾಗಿಣಿ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಅಷ್ಟೇ ಅಲ್ಲದೇ ನಮ್ಮ ಕಷ್ಟದ ಸಮಯದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಎಂದು ಹೇಳುವ ಮೂಲಕ ಕೃತಜ್ಞತೆ ಸಲ್ಲಿಸಿದರು.
ಸ್ಯಾಂಡಲ್‍ವುಡ್ ಡ್ರಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ನಟಿ ರಾಗಿಣಿ ದ್ವಿವೇದಿ ಸೋಮವಾರ ಪರಪ್ಪನ ಅಗ್ರಹಾರದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.