ಮಂಡ್ಯ: ನಟಿ ರಾಗಿಣಿಗೆ ರಾಜಕೀಯ ಬೆಂಬಲ ಇದ್ದಿದ್ದರೆ ಅವರು ಅರೆಸ್ಟ್ ಆಗ್ತಿರಲಿಲ್ಲ. ನಮ್ಮ ಯಾವುದೇ ಒಬ್ಬ ಮುಖಂಡ ಡ್ರಗ್ಸ್ ಮಾಫಿಯಾದಲ್ಲಿದ್ದರೆ ಅವರಿಗೆ ನಮ್ಮ ಸಹಕಾರ ಇಲ್ಲ. ಈ ವಿಚಾರದಲ್ಲಿ ಸರ್ಕಾರ ಹಿಟ್ ರನ್ ಮಾಡಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಯಾವುದೇ ಮುಖಂಡ ಡ್ರಗ್ ಮಾಫಿಯಾದಲ್ಲಿದ್ದರೆ ಅವರಿಗೆ ನಮ್ಮ ಸಹಕಾರ ಇಲ್ಲ. ಡ್ರಗ್ಸ್ ದಂಧೆಯನ್ನ ಬುಡಸಮೇತ ಕೀಳುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.
Advertisement
Advertisement
ಡ್ರಗ್ಸ್‍ನಿಂದ ಯುವಪೀಳಿಗೆ ಅಡ್ಡದಾರಿ ಹಿಡಿಯುತ್ತಿದೆ. ಡ್ರಗ್ಸ್ ದಂಧೆ ಮಟ್ಟಹಾಕಲು ಬಿಜೆಪಿ ಸರ್ಕಾರ ಕಟಿಬದ್ಧ. ಕಳೆದ ಉಪಚುನಾವಣೆಯಲ್ಲಿ ರಾಗಿಣಿ ಬಿಜೆಪಿ ಪರ ಕ್ಯಾಂಪೇನ್ ಮಾಡಿದ್ದು ನಿಜ. ಆದರೆ ಚಿತ್ರನಟ-ನಟಿಯರು ಒಂದೇ ಪಕ್ಷದ ಪರ ಪ್ರಚಾರ ಮಾಡಿದ ಉದಾಹರಣೆ ಇಲ್ಲ. ಒಂದೇ ಚುನಾವಣೆಯಲ್ಲಿ ಬೇರೆ ಬೇರೆ ಪಕ್ಷದ ಪರ ಪ್ರಚಾರ ಮಾಡಿದ್ದಾರೆ. ರಾಗಿಣಿ ಬಿಜೆಪಿ ಸೇರಿಲ್ಲ, ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ ಅಷ್ಟೇ. ಡ್ರಗ್ಸ್ ದಂಧೆ ನೆನ್ನೆ ಮೊನ್ನೆಯದ್ದಲ್ಲ. ಬಿಜೆಪಿ ಸರ್ಕಾರದಿಂದ ದಂಧೆ ತಡೆಯಲು ದಿಟ್ಟ ಕ್ರಮ ಎಂದು ಹೇಳಿದರು.
Advertisement
Advertisement
ಡ್ರಗ್ ಮಾಫಿಯಾ ಸಣ್ಣ ವಿಚಾರ ಅಲ್ಲ. ನೆರೆ ರಾಷ್ಟ್ರಗಳಲ್ಲಿ ಬೆಳೆದು ದೇಶದ ನಾನಾ ಭಾಗಗಳಿಗೆ ಸಪ್ಲೈ ಮಾಡುವ ಮೂಲಕ ಯವಶಕ್ತಿ ಕುಂದಿಸುವ ಕೆಲಸ ಮಾಡಲಾಗ್ತಿದೆ. ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣದ ಸವಾಲನ್ನು ಬಿಜೆಪಿ ಸ್ವೀಕರಿಸಿದೆ. ಈ ಕೆಲಸಕ್ಕೆ ಸಾರ್ವಜನಿಕರ ಸಹಕಾರವು ಅತ್ಯಗತ್ಯ ಎಂದರು.
https://www.youtube.com/watch?v=t7tJAAU2DeI