ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ ಮಾಫಿಯಾ ಕೇಸಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಪಾಲಾಗಿದ್ದಾರೆ. ಸಿಸಿಬಿ ಕಸ್ಟಡಿಯ ಅಂತ್ಯವಾದ ಹಿನ್ನೆಲೆಯಲ್ಲಿ ರಾಗಿಣಿಯನ್ನು 1ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇತ್ತ ನಟಿ ರಾಣಿಗೆ ಜೈಲು ಸೇರಿದಂತೆ ಮಗಳ ಪ್ರೀತಿಯ ಮನೆಯನ್ನು ಅವರ ತಂದೆ ನಿವೃತ್ತ ಸೇನಾಧಿಕಾರಿ ಮಾರಾಟಕ್ಕಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸಿಸಿಬಿ ಮುಂದೆ ತಮ್ಮ ಲವ್ ಬ್ರೇಕಪ್ ಸ್ಟೋರಿ ಬಿಚ್ಚಿಟ್ಟ ನಟಿಯರು
ಯಲಹಂಕದ ಅನನ್ಯ ಅಪಾರ್ಟ್‌ಮೆಂಟ್‌ನಲ್ಲಿ ರಾಗಿಣಿ ಅವರ ಫ್ಲ್ಯಾಟ್ ಇತ್ತು. ಇದೀಗ ಆ ಫ್ಲ್ಯಾಟನ್ನು ನಟಿ ರಾಗಿಣಿ ತಂದೆ ಮಾರಾಟ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅವರ ತಂದೆ ಮಗಳ ಪ್ರೀತಿಯ ಮನೆಯನ್ನು ಬರೋಬ್ಬರಿ ಎರಡು ಕೋಟಿಗೆ ಮಾರಾಟಕ್ಕಿಟ್ಟಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್‍ನಲ್ಲಿ ಕನ್ನಡದ ಮೊದಲ ನಟಿ ಜೈಲಿಗೆ – ಕೋರ್ಟಿನಲ್ಲಿ ಇಂದು ಏನೇನಾಯ್ತು?
Advertisement
ಈ ಅಪಾರ್ಟ್‌ಮೆಂಟ್ ಮಾಲೀಕರು ರಾಗಿಣಿಯ ತಂದೆ ರಾಕೇಶ್ ದ್ವಿವೇದಿ ಆಗಿದ್ದಾರೆ. ಹೀಗಾಗಿ ಅವರೇ 3 ಬಿಎಚ್‍ಕೆ ಫ್ಲ್ಯಾಟನ್ನು ಮಾರಾಟಕ್ಕಿಟ್ಟಿದ್ದಾರೆ ಎನ್ನಲಾಗಿದೆ. ನ್ಯಾಯಾಂಗ ಬಡಾವಣೆಯಲ್ಲಿ ಈ ಅನನ್ಯ ಅಪಾರ್ಟ್‌ಮೆಂಟ್ ಇದ್ದು, ಇದರಲ್ಲಿ ನಟಿ ರಾಗಿಣಿ ಎರಡು ಫ್ಲ್ಯಾಟ್ ಹೊಂದಿದ್ದಾರೆ. ಅದರಲ್ಲಿ ಒಂದು ಮನೆಯನ್ನು ಎರಡು ಕೋಟಿಗೆ ಮಾರಾಟಕ್ಕಿಟ್ಟಿದ್ದಾರೆ. ಮನೆ ಸೇಲ್‍ಗಿಟ್ಟಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಲಾಗಿದೆ.
Advertisement
Advertisement
ಡ್ರಗ್ಸ್ ಮಾಫಿಯಾಗೆ ಸಂಬಂಧಪಟ್ಟಂತೆ ವಿಚಾರಣೆಗೆ ಬರುವಂತೆ ಸಿಸಿಬಿ ಪೊಲೀಸರು ನಟಿ ರಾಗಿಣಿಗೆ ನೋಟಿಸ್ ಕೊಟ್ಟಿದ್ದರು. ಆದರೆ ನಟಿ ರಾಗಿಣಿ ಬೇರೆ ಬೇರೆ ಕಾರಣ ಹೇಳುವ ಮೂಲಕ ವಿಚಾರಣೆಗೆ ಹಾಜರಾಗುವುದನ್ನು ತಡ ಮಾಡಿದ್ದರು. ಆಗ ಸಿಸಿಬಿ ಪೊಲೀಸರು ಇದೇ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿದ್ದರು. ಸುಮಾರು ಮೂರು-ನಾಲ್ಕು ಗಂಟೆಗಳು ಕಾಲ ಸಿಸಿಬಿ ಅವರು ರೇಡ್ ಮಾಡಿದ ಬಳಿಕ ನಟಿ ರಾಗಿಣಿಯನ್ನು ವಶಪಡಿಸಿಕೊಂಡು ಸಿಸಿಬಿ ಕಚೇರಿಗೆ ವಿಚಾರಣೆಗೆಂದು ಕರೆದುಕೊಂಡು ಹೋಗಿ ಬಳಿಕ ಅರೆಸ್ಟ್ ಮಾಡಿದ್ದರು.
Advertisement
ಕಳೆದ 12 ದಿನಗಳಿಂದ ಸಿಸಿಬಿ ಕಸ್ಟಡಿಯಲ್ಲಿದ್ದ ನಟಿ ರಾಗಿಣಿ ಮುಂದಿನ 14 ದಿನ ಅಂದರೆ ಸೆಪ್ಟೆಂಬರ್ 28ರವರೆಗೆ ಪರಪ್ಪನ ಅಗ್ರಹಾರ ಜೈಲಲ್ಲಿ ಇರಲಿದ್ದಾರೆ. ಸಿಸಿಬಿ ಅಧಿಕಾರಿಗಳು ತಮ್ಮ ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ರಾಗಿಣಿಯನ್ನು ಪರಪ್ಪನ ಅಗ್ರಹಾರದಲ್ಲಿರೋ ಸೆಂಟ್ರಲ್ ಜೈಲಿಗೆ ಕಳಿಸಿದ್ದಾರೆ. ಮಡಿವಾಳದ ಎಫ್‍ಎಸ್‍ಎಲ್ ಕೇಂದ್ರದಿಂದ ಸೋಮವಾರ ಸಂಜೆ 7 ಗಂಟೆ ಹೊತ್ತಿಗೆ ನಟಿ ರಾಗಿಣಿ ಸೇರಿ ಐವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.