ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಹುಟ್ಟುಹಬ್ಬ ಹಿನ್ನೆಲೆ ರಕ್ತದಾನ ಶಿಬಿರವನ್ನು ಏರ್ಪಡಿಸುವ ಮೂಲಕವಾಗಿ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ.
ರಾಗಿಣಿ ದ್ವಿವೇದಿ 31ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೊರೊನಾ ಪರಿಸ್ಥಿತಿಯಲ್ಲಿ ರಕ್ತದ ಕೊರತೆ ನೀಗಿಸುವ ನಿಟ್ಟಿನಲ್ಲಿ ರಕ್ತದಾನ ಶಿಬಿರ ಏರ್ಪಡಿಸಿದ್ದಾರೆ. ಬೆಂಗಳೂರಿನ ಜಯನಗರದ ಜೈನ್ ಯೂನಿವರ್ಸಿಟಿಯಲ್ಲಿ ಬ್ಲಂಡ್ ಕ್ಯಾಂಪ್ ಆಯೋಜಿಸಲಾಗಿದ್ದು, ಜೆನೆಕ್ಸ್ಟ್ ಚಾರಿಟೇಬಲ್ ಟ್ರಸ್ಟ್ ಹಾಗೂ ರಾಷ್ಟ್ರೋತ್ಥಾನ ಬ್ಲಂಡ್ ಬ್ಯಾಂಕ್ ನೇತೃತ್ವದಲ್ಲಿ ಸುಮಾರು ಜನರಿಂದ ರಕ್ತದಾನ ಮಾಡಿದ್ದಾರೆ.
ಮೊದಲ ಲಾಕ್ ಡೌನ್ ಸಮಯದಲ್ಲಿ ಊಟ, ಮಾಸ್ಕ್, ದಿನಸಿ ನೀಡಿದ್ದ ನಟಿ ರಾಗಿಣಿ ಈಗ ಎರಡನೇ ಅಲೆಯ ಸಂದರ್ಭದಲ್ಲೂ ಸಮಾಜ ಮುಖಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ 500 ಮಾಸ್ಕ್, 1000 ಜನರಿಗೆ ಊಟ ನೀಡುತ್ತಿದ್ದಾರೆ.
ರಾಗಿಣಿ ಕಳೆದ ವಾರ ವ್ಯಾಕ್ಸಿನೇಷನ್ ಮೊದಲ ಡೋಸ್ ಹಾಕಿಸಿಕೊಳ್ಳುವ ಮುಂಚೆಯೇ ರಕ್ತದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ, ಈಗ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರವನ್ನು ಏರ್ಪಡಿಸಿರುವ ಖುಷಿಯಲ್ಲಿದ್ದಾರೆ. ಹಲವಾರು ಅಭಿಮಾನಿಗಳು ಈ ವೇಳೆ ರಕ್ತದಾನವನ್ನು ಮಾಡಿದ್ದಾರೆ.