ಇಸ್ಲಾಮಾಬಾದ್: ಇತ್ತೀಚೆಗೆ ಪಾಕಿಸ್ತಾನ ಮಾಜಿ ಆಟಗಾರ ಅಫ್ರಿದಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಕಾಶ್ಮೀರ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಿ ಭಾರೀ ಟೀಕೆಗೆ ಗುರಿಯಾಗಿದ್ದರು. ಕೊರೊನಾ ಸೋಂಕಿನಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನರಿಗೆ ತಮ್ಮ ಸಂಸ್ಥೆಯ ಮೂಲಕ ಅಫ್ರಿದಿ ನೆರವು ನೀಡಿ ಇದೇ ಸಂದರ್ಭವನ್ನು ಬಳಸಿಕೊಂಡು ಭಾರತದ ವಿರುದ್ಧ ಟೀಕೆ ಮಾಡಿದ್ದರು. ಇದರೊಂದಿಗೆ ಅಫ್ರಿದಿ ರಾಜಕೀಯ ಪ್ರವೇಶ ಮಾಡುವ ಉದ್ದೇಶದಿಂದ ಭಾರತದ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಹಲವರು ಪ್ರತಿಕ್ರಿಯೆ ನೀಡಿದ್ದರು.
Advertisement
ರಾಜಕೀಯ ಪ್ರವೇಶದ ಕುರಿತ ಹೇಳಿಕೆಗಳಿಗೆ ಸ್ಪಷ್ಟನೆ ನೀಡಿರುವ ಅಫ್ರಿದಿ, ತನಗೆ ರಾಜಕೀಯ ಪ್ರವೇಶ ಮಾಡುವ ಉದ್ದೇಶವಿಲ್ಲ. ಅಂತಹ ಉದ್ದೇಶ ಹೊಂದಿದ್ದರೆ ಯಾವಾಗಲೋ ಹೋಗುತ್ತಿದೆ. ಹಲವು ಪಕ್ಷಗಳು ತಮ್ಮ ಪಕ್ಷಕ್ಕೆ ಆಗಮಿಸುವಂತೆ ಆಹ್ವಾನ ಕೂಡ ನೀಡಿದ್ದವು. ಈಗಾಗಲೇ ನಾನು ರಾಜಕೀಯ ನಾಯಕರು ಮಾಡುವ ಸೇವಾ ಕೆಲಸವನ್ನೇ ಮಾಡುತ್ತಿದ್ದೇನೆ. ನನ್ನ ಕಾರ್ಯಕ್ಕೆ ಎಲ್ಲಾ ಪಕ್ಷದ ನಾಯಕರು ಬೆಂಬಲ ನೀಡುತ್ತಿದ್ದಾರೆ. ಸದ್ಯ ಪ್ರಧಾನಿ ಇರ್ಮಾನ್ ಖಾನ್ ಉತ್ತಮವಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ನಾವು ಅವರಿಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ. ಇದನ್ನು ಓದಿ: ‘ಕಾಶ್ಮೀರ ಎಂದಿಗೂ ನಮ್ಮದೇ’- ಅಫ್ರಿದಿ ಹೇಳಿಕೆಗೆ ಧವನ್ ತಿರುಗೇಟು
Advertisement
Advertisement
ಕಾಶ್ಮೀರ ಹಾಗೂ ಮೋದಿ ಕುರಿತ ನನ್ನ ಹೇಳಿಕೆ ವೈರಲ್ ಆದ ಬಳಿಕ ಅನಿವಾರ್ಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದಲ್ಲಿ ಪ್ರಜೆಗಳು ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ಅವರಿಗೂ ತಿಳಿದಿದೆ. ನನಗೆ ಸಹಾಯ ಮಾಡಿದ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಅವರ ಮೇಲೆ ಏರ್ಪಟ್ಟ ಒತ್ತಡವೇ ಬಹುದೊಡ್ಡ ಸಮಸ್ಯೆಯಾಗಿತ್ತು. ಆದ್ದರಿಂದಲೇ ಅವರು ನಿಸ್ಸಾಯಕರಾಗಿದ್ದರು. ಇದಕ್ಕಿಂತ ನಾನು ಹೆಚ್ಚು ಏನನ್ನು ಹೇಳಲು ಬಯಸುವುದಿಲ್ಲ ಎಂದು ಅಫ್ರಿದಿ ಸ್ಪಷ್ಟನೆ ನೀಡಿದ್ದಾರೆ. ಇದನ್ನು ಓದಿ: ಕಾಶ್ಮೀರ ಎಂದಿಗೂ ನಮ್ಮದೇ ಎಂದ ಅಫ್ರಿದಿಗೆ ಪಾಕ್ ಮಾಜಿ ಕ್ರಿಕೆಟಿಗನಿಂದಲೇ ಛೀಮಾರಿ
Advertisement
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೊರೊನಾದಿಂದ ಸಮಸ್ಯೆ ಎದುರಿಸುತ್ತಿದ್ದ ಮಂದಿಗೆ ಸಹಾಯ ನೆರವು ನೀಡಿದ್ದ ಅಫ್ರಿದಿ, ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿ ಮೋದಿ ವಿರುದ್ಧ ಟೀಕೆ ಮಾಡಿದ್ದರು. ಪಾಕಿಸ್ತಾನದ ಸೈನದ ಬಲದಷ್ಟು ಸೈನಿಕರನ್ನು ಪ್ರಧಾನಿ ಮೋದಿ ಕಾಶ್ಮೀರದಲ್ಲಿ ನಿಯೋಜಿಸಿದ್ದಾರೆ. ಆತನ ಮನಸ್ಸಿನಲ್ಲಿ ಕೊರೊನಾಗೂ ಹೆಚ್ಚಿನ ರೋಗ ಇದೇ ಎಂದು ಹೇಳಿದ್ದರು.