ಕೆಜಿಎಫ್‍ನ 120 ವರ್ಷದ ಹಳೆಯ ಆಸ್ಪತ್ರೆ ಜೀರ್ಣೋದ್ಧಾರ, ಲೋಕಾರ್ಪಣೆ

Public TV
2 Min Read
dcm joshi

ಬೆಂಗಳೂರು: ಕೆಜಿಎಫ್‍ನ 120 ವರ್ಷದ ಹಳೆಯ ಬಿಜಿಎಂಎಲ್ ಆಸ್ಪತ್ರೆಯನ್ನು ಜೀರ್ಣೋದ್ಧಾರ ಮಾಡಲಾಗಿದ್ದು, ಇಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

ಬಿಜೆಪಿ ಮತ್ತು ಆರ್‍ಎಸ್‍ಎಸ್ ಕಾರ್ಯಕರ್ತರ ಪರಿಶ್ರಮದಿಂದ ಕೆಜಿಎಫ್‍ನಲ್ಲಿ 120 ವರ್ಷಗಳ ಹಳೆಯ ಬಿಜಿಎಂಎಲ್ ಆಸ್ಪತ್ರೆಯನ್ನು ಜೀರ್ಣೋದ್ಧಾರ ಮಾಡಲಾಗಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೋಕಾರ್ಪಣೆ ಮಾಡಿದರು. ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

FotoJet 9 2

ಲಸಿಕೆ ಅಗತ್ಯವಿದೆ
ಕೇಂದ್ರ ಸರ್ಕಾರದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಕೊಡಿಸಬೇಕು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಮಾಡಿದರು.

ಒಂದೆಡೆ ಕೋವಿಡ್ ಸೋಂಕಿತರನ್ನು ಪತ್ತೆ ಮಾಡುತ್ತ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ವ್ಯಾಕ್ಸಿನೇಷನ್ ಕೂಡ ಸಾಗುತ್ತಿದೆ. ಎರಡನೇ ಅಲೆ ತೀವ್ರವಾಗಿರುವ ಈ ಸಂದರ್ಭದಲ್ಲಿ ಲಸಿಕೆ ಬಹಳ ಅಗತ್ಯವಾಗಿದೆ. ಲಸಿಕೆಯು ಜನರನ್ನು ಉಳಿಸಲಿದೆ ಮಾತ್ರವಲ್ಲದೆ, ಅವರ ಮನೋಸ್ಥೈರ್ಯವನ್ನೂ ಹೆಚ್ಚಿಸುತ್ತಿದೆ ಎಂದರು. ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಕೂಡಲೇ ಈ ಬಗ್ಗೆ ಸಂಬಂಧಟ್ಟ ಸಚಿವರು, ಅಧಿಕಾರಿಗಳ ಜೊತೆ ಮಾತನಾಡುವುದಾಗಿ ಭರವಸೆ ನೀಡಿದರು.

corona vaccine 1 medium

ಹೊಸದಾಗಿ 30 ಸಾವಿರ ಆಕ್ಸಿಜನ್ ಬೆಡ್
ಎರಡನೇ ಅಲೆ ತೀವ್ರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸದಾಗಿ 30 ಸಾವಿರ ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿದೆ. ಈಗ ರಾಜ್ಯಾದ್ಯಂತ ಒಟ್ಟು 60 ಸಾವಿರ ಆಕ್ಸಿಜನ್ ಬೆಡ್‍ಗಳಿವೆ. ಗ್ರಾಮೀಣ ಮಟ್ಟದಲ್ಲಿ ಅತ್ಯುತ್ತಮ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ ಸೇರಿ ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿರುವ ಆರೋಗ್ಯ ವ್ಯವಸ್ಥೆಯನ್ನು ಅತ್ಯುತ್ತಮಪಡಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಾ.ಅಶ್ವಥ್ ನಾರಾಯಣ್ ತಿಳಿಸಿದರು.

ಹಳ್ಳಿ ಪ್ರದೇಶದಲ್ಲಿ ಮೂಲಸೌಕರ್ಯ ಹೆಚ್ಚಿಸುವುದು ಹಾಗೂ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಇಡೀ ದೇಶದಲ್ಲೇ ಕರ್ನಾಟಕ ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವಂತೆ ಮಾಡುವ ಪ್ರಯತ್ನ ನಡೆದಿದೆ ಎಂದರು.

corona virus 1 1

ರೆಡ್ ಝೋನ್‍ನಲ್ಲಿ ಕೋಲಾರ
ಕೋವಿಡ್ ವಿಷಯದಲ್ಲಿ ಕೋಲಾರ ಜಿಲ್ಲೆ ಈಗ ರೆಡ್ ಝೋನ್‍ನಲ್ಲಿದೆ. ಸೋಂಕು ತಡೆಗೆ ಇನ್ನೂ ಹೆಚ್ಚಿನ ಕ್ರಮ ವಹಿಸಬೇಕಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕಿದೆ. ಸ್ಥಳೀಯ ಮಟ್ಟದಲ್ಲೇ ಟಾಸ್ಕ್‍ಪೋರ್ಸ್‍ಗಳನ್ನು ರಚನೆ ಮಾಡಿ ಮನೆಮನೆಗೂ ಹೋಗಿ ಸೋಂಕಿತರನ್ನು ಪತ್ತೆ ಮಾಡಬೇಕು. ಟೆಲಿ ಟ್ರಾಯಾಜಿಂಗ್ ಹಾಗೂ ಭೌತಿಕ ಟ್ರಾಯಾಜಿಂಗ್ ಹೆಚ್ಚಿಸಬೇಕು. ಮನೆ ಮನೆಯನ್ನೂ ಸಮೀಕ್ಷೆ ಮಾಡಬೇಕು ಎಂದು ಸಭೆಯಲ್ಲಿ ಹಾಜರಿದ್ದ ಜಿಲ್ಲಾಧಿಕಾರಿಗಳಿಗೆ ಡಿಸಿಎಂ ಸೂಚಿಸಿದರು.

ಸೋಂಕಿತರ ಸಂಪರ್ಕಿತರನ್ನು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಪತ್ತೆ ಹಚ್ಚಲಾಗುತ್ತಿದೆ. ಆದರೆ ಕೋವಿಡ್ ಪರೀಕ್ಷೆ ರಿಸಲ್ಟ್ ಕೊಡಲು ಎರಡು ದಿನಕ್ಕೂ ಹೆಚ್ಚಿನ ಸಮಯ ಆಗುತ್ತಿದೆ. 24 ಗಂಟೆಯೊಳಗೆ ಅಥವಾ ಅದಕ್ಕೂ ಮುನ್ನವೇ ರಿಸಲ್ಟ್ ಕೊಡುವ ವ್ಯವಸ್ಥೆ ಮಾಡಿ. ಇನ್ನು ಮುಂದೆ ಗ್ರಾಮೀಣ ಪ್ರದೇಶದಲ್ಲಿ ಯಾರನ್ನೂ ಹೋಮ್ ಐಸೋಲೇಶನ್ ಮಾಡಬೇಡಿ. ಎಲ್ಲರನ್ನೂ ಕಡ್ಡಾಯವಾಗಿ ಕೋವಿಡ್ ಕೇರ್ ಗೆ ಶಿಫ್ಟ್ ಮಾಡಿ ಚಿಕಿತ್ಸೆ ಕೊಡಿ ಎಂದು ಜಿಲ್ಲಾಧಿಕಾರಿಗೆ ಡಿಸಿಎಂ ಸೂಚಿಸಿದರು.

WhatsApp Image 2021 05 19 at 8.05.27 PM e1621436444374

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೋಲಾರ ಸಂಸದ ಎಸ್.ಮುನಿಸ್ವಾಮಿ, ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಸೇರಿದಂತೆ ಮುಂತಾದವರು ಭಾಗಿಯಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *