ರಾಜ್ಯದಲ್ಲಿಂದು ದಾಖಲೆಯ 515 ಕೊರೊನಾ ಪಾಸಿಟಿವ್ ಪ್ರಕರಣ- 4,835ಕ್ಕೇರಿದ ಸೋಂಕಿತರ ಸಂಖ್ಯೆ

Public TV
1 Min Read
CORONA VIRUS 5

– ಉಡುಪಿಯಲ್ಲಿ ಬರೋಬ್ಬರಿ 204 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತನ್ನ ಕಬಂಧಬಾಹುಗಳನ್ನು ವಿಸ್ತರಗೊಳಿಸುತ್ತಿದ್ದು, ಇಂದು ದಾಖಲೆಯ 515 ಹೊಸ ಕೊರೊನಾ ಪಾಸಿಟವ್ ಪ್ರರಕರಣಗಳು ವರದಿಯಾಗಿದೆ. ಅದರಲ್ಲೂ ಕಳೆದ 3 ದಿನಗಳಿಂದ ಭಾರೀ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದ ಉಡುಪಿಯಲ್ಲಿ ಇಂದು ಕೂಡ 204 ಹೊಸ ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 4835ಕ್ಕೇರಿದೆ.

WhatsApp Image 2020 06 05 at 5.36.09 PM

ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ವರದಿಯಲ್ಲಿ ಕಲಬುರಗಿ 42, ಬೆಂಗಳೂರು ನಗರ 10, ಯಾದಗಿರಿ 74, ಮಂಡ್ಯ 13, ಬೆಳಗಾವಿ 36, ಬೀದರ್ 39, ಹಾಸನ 03, ವಿಜಯಪುರ 53, ಚಿಕ್ಕಬಳ್ಳಾಪುರ 3, ದಕ್ಷಿಣ ಕನ್ನಡ 8, ಉತ್ತರ ಕನ್ನಡ 7, ಧಾರವಾಡ 3, ಬೆಂಗಳೂರು ಗ್ರಾಮಾಂತರ 12, ಹಾವೇರಿ 2, ರಾಮನಗರ 2, ಕೋಲಾರ, ಬಳ್ಳಾರಿ, ಬಾಗಲಕೋಟೆ, ದಾವಣಗೆರೆಯಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.

WhatsApp Image 2020 06 05 at 5.36.10 PM 1

ಕೊರೊನಾ ಮಹಾಮಾರಿಯಿಂದ ಚೇತರಿಸಿಕೊಂಡಿರುವ 83 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಗುಣಮುಖರಾಗಿರುವವರ ಸಂಖ್ಯೆ 1,688ಕ್ಕೇರಿದೆ. ರಾಜ್ಯದಲ್ಲಿ ಸದ್ಯ 3,088 ಪ್ರಕರಣಗಳು ಸಕ್ರಿಯಾಗಿವೆ. ಇಂದು ಪತ್ತೆಯಾದ ಪಾಸಿಟಿವ್ ಪ್ರಕರಣ ಪೈಕಿ 482 ಪ್ರಕರಣಗಳು ಅಂತರರಾಜ್ಯ ಹಾಗೂ 1 ಅಂತರರಾಷ್ಟ್ರೀಯ ಪ್ರಯಾಣದ ಹಿನ್ನೆಲೆಯನ್ನು ಹೊಂದಿದೆ. ರಾಜ್ಯದ ವಿವಿಧ ಆಸ್ಪತ್ರೆಯ ತುರ್ತು ನಿಗಾ ಘಟಕಗಳಲ್ಲಿ 13 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

WhatsApp Image 2020 06 05 at 5.36.10 PM

ಇಂದು ಪರೀಕ್ಷೆ ಮಾಡಿದ 13,627 ಮಾದರಿಗಳಲ್ಲಿ 12,797 ನೆಗೆಟಿವ್ ಬಂದಿದ್ದು, 36,787 ಮಂದಿ ಕಾರಂಟೈನ್‍ನಲ್ಲಿದ್ದಾರೆ. ರಾಜ್ಯದಲ್ಲಿ ಇದುವರೆಗೂ 3,60,720 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, ಒಟ್ಟು 3,49,951 ಮಾದರಿಗಳು ನೆಗೆಟಿವ್ ಬಂದಿದೆ. 4,835 ಪಾಟಿಸಿಟಿವ್ ವರದಿಗಳು ದೃಢವಾಗಿದೆ. ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಂದು 64 ಮಾದರಿಗಳನ್ನು ತಪಾಸಣೆ ಮಾಡಲಾಗಿದೆ. ಒಟ್ಟಾರೆ ಈವರೆಗೆ ಏರ್ ಪೋರ್ಟ್‍ನಲ್ಲಿ 14,6731 ತಪಾಸಣೆ ಮಾಡಿದ್ದಾರೆ.

1 1

Share This Article
Leave a Comment

Leave a Reply

Your email address will not be published. Required fields are marked *