– ಇಂದೂ ಬೆಂಗಳೂರಿಗಿಂತ ಮೈಸೂರಲ್ಲಿ ಹೆಚ್ಚು ಸಾವು
ಬೆಂಗಳೂರು: ರಾಜ್ಯದಲ್ಲಿ ನಿಧಾನವಾಗಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಇಂದು 3,310 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 6,524 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
ಇಂದು ಕೊರೊನಾಗೆ 114 ಜನರು ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 34,539ಕ್ಕೆ ಏರಿಕೆಯಾಗಿದೆ. ಸದ್ಯ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಶೇ.3.44ಕ್ಕೆ ಇಳಿಕೆಯಾಗಿದೆ. ಜೊತೆಗೆ ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಪ್ರಮಾಣ ಶೇ.2.09ಕ್ಕೆ ಇಳಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 1,07,195 ಸಕ್ರಿಯ ಪ್ರಕರಣಗಳಿವೆ. ಮೈಸೂರಲ್ಲಿ 22 ಜನ ಸಾವಪ್ಪಿದ್ದಾರೆ. ಬೆಂಗಳೂರಲ್ಲಿ 17 ಜನರನ್ನು ಕೊರೊನಾ ಬಲಿ ಪಡೆದಿದೆ. ಈ ಮೂಲಕ ಬೆಂಗಳೂರಿಗಿಂತ ಮೈಸೂರಲ್ಲಿ ಹೆಚ್ಚು ಜನ ಸಾವನ್ನಪ್ಪಿದ್ದಾರೆ.
Advertisement
Advertisement
ಈ ವರೆಗೆ ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಎರಡು, ಡೆಲ್ಟಾ 318 ಪ್ರಕರಣಗಳು ವರದಿಯಾಗಿದೆ. ಒಟ್ಟು 1,58,072 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿಯೂ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಇಂದು 614 ಜನರು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಇವತ್ತು 17 ಜನರು ಮೃತಪಟ್ಟಿದ್ದು, ಸದ್ಯ 66,232 ಸಕ್ರಿಯ ಪ್ರಕರಣಗಳಿವೆ.
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 8, ಬಳ್ಳಾರಿ 29, ಬೆಳಗಾವಿ 87, ಬೆಂಗಳೂರು ಗ್ರಾಮಾಂತರ 80, ಬೆಂಗಳೂರು ನಗರ 614, ಬೀದರ್ 6, ಚಾಮರಾಜನಗರ 71, ಚಿಕ್ಕಬಳ್ಳಾಪುರ 47, ಚಿಕ್ಕಮಗಳೂರು 39, ಚಿತ್ರದುರ್ಗ 13, ದಕ್ಷಿಣ ಕನ್ನಡ 377, ದಾವಣಗೆರೆ 89, ಧಾರವಾಡ 34, ಗದಗ 23, ಹಾಸನ 399, ಹಾವೇರಿ 29, ಕಲಬುರಗಿ 14, ಕೊಡಗು 183, ಕೋಲಾರ 140, ಕೊಪ್ಪಳ 21, ಮಂಡ್ಯ 119, ಮೈಸೂರು 367, ರಾಯಚೂರು 14, ರಾಮನಗರ 11, ಶಿವಮೊಗ್ಗ 212, ತುಮಕೂರು 80, ಉಡುಪಿ 92, ಉತ್ತರ ಕನ್ನಡ 99, ವಿಜಯಪುರ 8 ಮತ್ತು ಯಾದಗಿರಿಯಲ್ಲಿ 5 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.