– 435 ಜನಕ್ಕೆ ಕೊರೊನಾ ಲಸಿಕೆ
ಬೆಂಗಳೂರು: ರಾಜ್ಯಲ್ಲಿಂದು 529 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, 738 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 9,36,955ಕ್ಕೆ ಏರಿಕೆಯಾಗಿದೆ.
ಸದ್ಯ 6,633 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, 147 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಕೊರೊನಾ ನಾಲ್ವರನ್ನ ಬಲಿ ಪಡೆದುಕೊಂಡಿದ್ದು, ಮೃತರ ಸಂಖ್ಯೆ 12,204ಕ್ಕೆ ಏರಿಕೆಯಾಗಿದೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.0.80 ಮತ್ತು ಮರಣ ಪ್ರಮಾಣ ಶೇ.0.75ರಷ್ಟಿದೆ. ಇಂದು ಒಟ್ಟು 65,563 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
Advertisement
Advertisement
ಇಂದು 435 ಜನ ಕೊರೊನಾ ಲಸಿಕೆಯನ್ನ ಪಡೆದುಕೊಂಡಿದ್ದಾರೆ. ಬಳ್ಳಾರಿ 52, ಬೆಂಗಳೂರು ಗ್ರಾಮಾಂತರ 43, ಧಾರವಾಡ 40, ರಾಯಚೂರು 73 ಮತ್ತು ಹಾಸನದಲ್ಲಿ 227 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ.
Advertisement
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 13, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 276, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 33, ಚಿಕ್ಕಮಗಳೂರು 5, ಚಿತ್ರದುರ್ಗ 11, ದಕ್ಷಿಣ ಕನ್ನಡ 19, ದಾವಣಗೆರೆ 5, ಧಾರವಾಡ 5, ಗದಗ 0, ಹಾಸನ 14, ಹಾವೇರಿ 2, ಕಲಬುರಗಿ 15, ಕೊಡಗು 6, ಕೋಲಾರ 2, ಕೊಪ್ಪಳ 0, ಮಂಡ್ಯ 8, ಮೈಸೂರು 26, ರಾಯಚೂರು 2, ರಾಮನಗರ 1, ಶಿವಮೊಗ್ಗ 5, ತುಮಕೂರು 36, ಉಡುಪಿ 7, ಉತ್ತರ ಕನ್ನಡ 16, ವಿಜಯಪುರ 2 ಮತ್ತು ಯಾದಗಿರಿಯಲ್ಲಿ 4 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.