ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಕೊರೊನಾದಿಂದ ಮತ್ತೊಬ್ಬರು ಮೃತಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಆಂಧ್ರ ಪ್ರದೇಶದಿಂದ ಬಂದಿದ್ದ 60 ವರ್ಷದ ವೃದ್ಧ ಕೊರೊನಾದಿಂದ ಮೃತಪಟ್ಟಿದ್ದಾರೆ. ರೋಗಿ ನಂಬರ್ 796 ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತ ವೃದ್ಧನಿಂದ ಪತ್ನಿ ಮತ್ತು ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್‍ಗೆ ಸೋಂಕು ತಗುಲಿತ್ತು.
Advertisement
Advertisement
ಮೃತ ವೃದ್ಧ ಅನಂತಪುರ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ. ಅನಾರೋಗ್ಯದ ಕಾರಣ ಆಂಧ್ರ ಪ್ರದೇಶದಲ್ಲೇ ಚಿಕಿತ್ಸೆ ಪಡೆದಿದ್ದರು. ನಂತರ ಚಿಕಿತ್ಸೆಗೆ ಎಂದು ಬೆಂಗಳೂರಿಗೆ ಅನಂತಪುರ ಜಿಲ್ಲೆಯಿಂದ ಬಂದಿದ್ದರು. ಈ ವೇಳೆ ವೃದ್ಧ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದಾರೆ. ಆಗ ವೃದ್ಧ ಲೋ ಬಿಪಿ, ಶುಗರ್, ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು.
Advertisement
ತಕ್ಷಣ ವೃದ್ಧನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆ ವರದಿಯಲ್ಲಿ ಪಾಸಿಟಿವ್ ಬಂದಿದೆ. ನಂತರ ವೃದ್ಧನನ್ನು ಕೋವಿಡ್ ವಾರ್ಡಿನಲ್ಲಿ ಇರಿಸಿ ಮೂರು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.