ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ ಹಾವಳಿ ದಿನೇದಿನೇ ಜಾಸ್ತಿ ಆಗ್ತಾ ಇದೆ. ಕೊರೋನಾ ಕೇಸ್ ಕಡಿಮೆಯಾಗುತ್ತಿದ್ದಂತೆ ಬ್ಲ್ಯಾಕ್ ಫಂಗಸ್ ಕೇಸ್ ಏರಿಕೆಯಾಗ್ತಾ ಇದೆ. ರಾಜ್ಯದ 30 ಜಿಲ್ಲೆಗಳಲ್ಲೂ ಒಟ್ಟು 3703 ಬ್ಲ್ಯಾಕ್ ಫಂಗಸ್ ಕೇಸ್ ದಾಖಲಾಗಿದೆ. ಬ್ಲ್ಯಾಕ್ ಫಂಗಸ್ ಗೆ ರಾಜ್ಯಾದ್ಯಂತ 360 ಜನ ಬಲಿಯಾಗಿದ್ದಾರೆ.
Advertisement
ರಾಜಧಾನಿ ಬೆಂಗಳೂರಿನಲ್ಲಿ ಕೂಡ ಬ್ಲ್ಯಾಕ್ ಫಂಗಸ್ ಹಾವಳಿ ಜೋರಿದೆ. ಇಲ್ಲಿಯವರೆಗೂ ಬೆಂಗಳೂರಿನಲ್ಲಿ 1174 ಬ್ಲ್ಯಾಕ್ ಫಂಗಸ್ ಕೇಸ್ ದಾಖಲಾಗಿವೆ. ಜೊತೆಗೆ ಬ್ಲ್ಯಾಕ್ ಫಂಗಸ್ ಗೆ ಬೆಂಗಳೂರಿನಲ್ಲಿ 112ಜನ ಸಾವನ್ನಪ್ಪಿದ್ದಾರೆ. ದಿನೇ ದಿನೇಕೇಸ್ ಏರಿಕೆಯಾಗ್ತಾ ಇದ್ದು ಆತಂಕ ಹುಟ್ಟಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದು ಕಡಿಮೆ ಕೇಸ್ ದಾಖಲು – ಪಾಸಿಟಿವಿಟಿ ರೇಟ್ ಸಂಪೂರ್ಣ ಇಳಿಕೆ
Advertisement
Advertisement
ರಾಜ್ಯದ 30 ಜಿಲ್ಲೆಗಳಲ್ಲಿ ಅತಿ ಹೆಚ್ಚು ಬ್ಲ್ಯಾಕ್ ಫಂಗಸ್ ಇರುವುದು ಬೆಂಗಳೂರು ನಗರದಲ್ಲಿ. ಬೆಂಗಳೂರಿನಲ್ಲಿ ಇದುವರೆಗೂ 1174 ಕೇಸ್ ದಾಖಲಾಗಿದ್ದು, ವಿಕ್ಟೋರಿಯಾದಲ್ಲಿ 209ಕೇಸ್, ಬೌರಿಂಗ್ ಆಸ್ಪತ್ರೆ 404 ಕೇಸ್, ಕೆಸಿ ಜನರಲ್ 04 ಕೇಸ್, ಇಂದಿರಾಗಾಂಧಿ 3 ಕೇಸ್ ಪತ್ತೆಯಾಗಿದೆ. ಖಾಸಗಿ ಆಸ್ಪತ್ರೆಗಳಲ್ಲೂ ಕೇಸ್ ಏರಿಕೆಯಾಗ್ತಾನೆ ಇದೆ.
Advertisement