ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಆಂಧ್ರಪ್ರದೇಶದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಳೆಯಾಗಲಿದೆ. ರಾಜ್ಯದಲ್ಲಿ ಸಾಧರಾಣದಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಮೈಸೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜ ನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ತುಮಕೂರಿನಲ್ಲಿ ಮುಂದಿನ ಮೂರು ದಿನ ಮಳೆ ಜೋರಿರಲಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಪಬ್ಲಿಕ್ ಟಿವಿಗೆ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.