ತುಮಕೂರು: ರಾಜ್ಯದಲ್ಲಿ ಈಗ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ, ಒಂದು ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೊಂದು ಡಿಫ್ಯಾಕ್ಟ್ ಸಿಎಂ ವಿಜಯೇಂದ್ರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವ್ಯಂಗ್ಯವಾಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಲೀಂ ಅಹ್ಮದ್ ಅವರು, ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಕಾಂಗ್ರೆಸ್‍ಗೂ ಪಾಲು ಇದೆ ಎಂಬ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ಅಲ್ಲಗಳೆದರು. ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಇದನ್ನು ನಾವು ಹೇಳುತ್ತಿಲ್ಲ, ಅವರ ಪಕ್ಷದ ಮುಖಂಡರು ಹೇಳುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಹಮಾರ ಕುತ್ತಾ ಹಮಾರ ಗಲ್ಲಿ ಮೇ ಷೇರ್ ತರಹ ಬಿಎಸ್‌ವೈ: ಸಿದ್ದರಾಮಯ್ಯ
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ತನಿಖೆ ಮಾಡಿ ಎಂದು ಅವರ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಟೆಂಡರ್ ಪ್ರಕ್ರಿಯೆಯಲ್ಲಿ ಹಣಲೂಟಿ ಮಾಡಿದ್ದಾರೆ ಎಂದು ಮಂತ್ರಿಗಳು, ಮಾಜಿ ಮಂತ್ರಿಗಳು ಹೇಳುತ್ತಿದ್ದಾರೆ. ಹೀಗಾಗಿ ಇದೊಂದು ಭ್ರಷ್ಟ ಸರ್ಕಾರ ನಾಯಕನಿಲ್ಲದ ಸರ್ಕಾರವಾಗಿದೆ ಎಂದು ಟೀಕಿಸಿದರು.