– ಸರ್ಕಾರದ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿ
ಬೆಂಗಳೂರು: ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ ಎಂದು ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ನಿರಂತರ ಟ್ವೀಟ್ ಮಾಡುವ ಮೂಲಕ ಅತೀಯಾದ ಮಳೆಯಿಂದಾಗಿ ಉಂಟಾಗುತ್ತಿರುವ ತೊಂದರೆಗಳಿಗೆ ಸ್ಪಂದಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮೊದಲಿಗೆ “ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ, ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ರಾಜ್ಯದ ಕಂದಾಯ ಸಚಿವರೂ ಕ್ವಾರಂಟೈನ್ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ. ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ ಹೆಚ್ಚಿರುವುದರಿಂದ ಪೂರಕ ವ್ಯವಸ್ಥೆ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಗಮನ ಹರಿಸಬೇಕು ಎಂದಿದ್ದಾರೆ.
ಅಲ್ಲದೇ ಆಸ್ಪತ್ರೆಯಲ್ಲಿರುವ ಸಿಎಂ ಯಡಿಯೂರಪ್ಪ ಅವರು ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ, ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು” ಎಂದು ಸಿಎಂಗೆ ಸಲಹೆ ನೀಡಿದರು.
ರಾಜ್ಯದ ಕಂದಾಯ ಸಚಿವರೂ ಕ್ವಾರಂಟೈನ್ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ.
ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ ಹೆಚ್ಚಿರುವುದರಿಂದ ಪೂರಕ ವ್ಯವಸ್ಥೆ ಮಾಡುವ ಬಗ್ಗೆ @CMofKarnataka ಅವರು ಗಮನ ಹರಿಸಬೇಕು.
3/5#floods
— Siddaramaiah (@siddaramaiah) August 6, 2020
ಅಲ್ಲದೇ “ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು. ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ. ಹಳೆಯ ಹಾನಿಯ ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ರಾಜ್ಯ ಸರ್ಕಾರದ ಈ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ” ಎಂದು ಸಿದ್ದರಾಮಯ್ಯ ಆಕ್ರೋಶದಿಂದ ಹೇಳಿದ್ದಾರೆ.
ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ.
ಹಳೆಯ ಹಾನಿಯ
ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ.
ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ.
ರಾಜ್ಯ ಸರ್ಕಾರದ ಈ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ.
5/5#floods
— Siddaramaiah (@siddaramaiah) August 6, 2020
ಸಿದ್ದರಾಮಯ್ಯ ಟ್ವೀಟ್ ಮಾಡಿದ ಬೆನ್ನಲ್ಲೇ ಕಂದಾಯ ಸಚಿವ ಆರ್.ಅಶೋಕ್ ತಮಗೆ ಕೊರೊನಾ ನೆಗೆಟಿವ್ ಬಂದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. “ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೋವಿಡ್ 19 ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಿ 8 ದಿನಗಳ ನಂತರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ಈ ಪರೀಕ್ಷೆಯ ವರದಿಯಲ್ಲಿ ಕೋವಿಡ್ ನೆಗೆಟಿವ್ ಬಂದಿರುವುದು ನಮಗೆ ನೆಮ್ಮದಿ ತಂದಿದೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಹಾಗೂ ಪ್ರವಾಹ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡುವ ಮೂಲಕ ಆರ್.ಅಶೋಕ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಶ್ರೀ @BSYBJPರವರಿಗೆ ಕೋವಿಡ್-19 ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಅವರನ್ನು ಭೇಟಿಯಾಗಿ 8 ದಿನಗಳ ನಂತರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆನು.
ಈ ಪರೀಕ್ಷೆಯ ವರದಿ ಕೋವಿಡ್-ನೆಗಟಿವ್ ಬಂದಿರುವುದು ನಮಗೆ ನೆಮ್ಮದಿ ತಂದಿದ್ದು, ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣೆ ಹಾಗೂ ಪ್ರವಾಹ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ. pic.twitter.com/tOLDLloEyQ
— R. Ashoka (ಆರ್. ಅಶೋಕ) (@RAshokaBJP) August 6, 2020