ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಮತ್ತು ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಇಳಿಕೆ ಕಾಣುತ್ತಿದೆ. ರಾಜ್ಯದಲ್ಲಿ ಇಂದು 2,162 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. 48 ಮಂದಿ ಸಾವನ್ನಪ್ಪಿದ್ದಾರೆ. 2,879 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಎರಡು ಜಿಲ್ಲೆಗಳಲ್ಲಿ ಕೇವಲ 1 ಪ್ರಕರಣ ದಾಖಲಾಗಿದೆ.
Advertisement
ರಾಜ್ಯದಲ್ಲಿ ಒಟ್ಟು 37,141 ಸಕ್ರಿಯ ಪ್ರಕರಣಗಳು ಇದ್ದು, ಕೋವಿಡ್ ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 1.48 ಆಗಿದ್ದು, ಕೋವಿಡ್-19 ಮರಣ ಪ್ರಮಾಣ ಶೇ.2.22ರಷ್ಟಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 28,69,320 ಮಂದಿಗೆ ಕೊರೊನಾ ಬಂದಿದ್ದರೆ, ಒಟ್ಟು 27,96,377 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
Advertisement
Advertisement
ಇಂದು ರಾಜ್ಯದಲ್ಲಿ ಒಟ್ಟು 1,45,666 ಸ್ಯಾಂಪಲ್ (ಆರ್‍ಟಿ ಪಿಸಿಆರ್ 32,099 + 1,13,567 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 552 ಮಂದಿಗೆ ಕೊರೊನಾ ಸೋಂಕು ತಗುಲಿದೆ. 746 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ. 5 ಮಂದಿ ಸಾವನ್ನಪ್ಪಿದ್ದಾರೆ.
Advertisement
ದಕ್ಷಿಣ ಕನ್ನಡ 218, ಮೈಸೂರು 211, ಹಾಸನ 178 , ಉಡುಪಿ 113, ಶಿವಮೊಗ್ಗ 110, ಚಿಕ್ಕಮಗಳೂರು 109, ಕೊಡಗು 108, ಮತ್ತು ಬೆಳಗಾವಿಯಲ್ಲಿ 106 ಪ್ರಕರಣಗಳೊಂದಿಗೆ ನೂರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಕೇವಲ 1 ಪ್ರಕರಣಗಳು ದಾಖಲಾಗಿದೆ.