– ಒಟ್ಟು ಸೋಂಕಿತರ ಸಂಖ್ಯೆ 5,760ಕ್ಕೆ ಏರಿಕೆ
– ಉಡುಪಿಯಲ್ಲಿ 215 ಮಂದಿ ಡಿಸ್ಚಾರ್ಜ್
ಬೆಂಗಳೂರು: ಕಲಬುರಗಿ, ಯಾದಗಿರಿ, ಬೀದರ್, ಉಡುಪಿಯಲ್ಲಿ ಕೊರೊನಾ ಸ್ಫೋಟಗೊಂಡಿದೆ. ಇಂದು ಹೊಸದಾಗಿ 308 ಪ್ರಕರಣಗಳ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 5,760ಕ್ಕೆ ಏರಿಕೆಯಾಗಿದೆ.
ಒಟ್ಟು 308 ಪ್ರಕರಣಗಳ ಪೈಕಿ 277 ಅಂತರಾಜ್ಯ ಪ್ರಯಾಣಿಕರಾಗಿದ್ದು ದಕ್ಷಿಣ ಕನ್ನಡದಲ್ಲಿ ದುಬೈನಿಂದ ಮರಳಿದ ಯುವಕನಿಗೆ ಸೋಂಕು ಬಂದಿದೆ. ಇಂದು ಒಟ್ಟು 387 ಮಂದಿ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ ಒಟ್ಟು 2519 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು ರಾಜ್ಯದಲ್ಲಿ 3,175 ಸಕ್ರಿಯ ಪ್ರಕರಣಗಳಿವೆ.
Advertisement
Advertisement
ಎಲ್ಲಿ ಎಷ್ಟು ಜನ ಡಿಸ್ಚಾರ್ಜ್?
ಈ ಪೈಕಿ ಉಡುಪಿಯಲ್ಲಿ 215 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಕಲಬುರಗಿಯಲ್ಲಿ 47, ರಾಯಚೂರಿನಲ್ಲಿ 29, ವಿಜಯಪುರದಲ್ಲಿ 29, ಯಾದಗಿರಿ 23, ಹಾಸನ 16, ಮಂಡ್ಯ 11, ಧಾರವಾಡ 6, ತುಮಕೂರು 6, ಹಾವೇರಿ 5 ಮಂದಿ ಬಿಡುಗಡೆಯಾಗಿದ್ದಾರೆ.
Advertisement
Advertisement
ಎಲ್ಲಿ ಎಷ್ಟು ಮಂದಿಗೆ ಸೋಂಕು?
ಕಲಬರುಗಿ 99, ಯಾದಗಿರಿ 66, ಬೀದರ್ 48, ಉಡುಪಿ 45, ಬೆಂಗಳೂರು ನಗರ 48, ಬಳ್ಳಾರಿ 8, ಗದಗ 6, ಶಿವಮೊಗ್ಗ ಮತ್ತು ಧಾರವಾಡ 4, ಹಾಸನ 3, ದಕ್ಷಿಣ ಕನ್ನಡ 3, ಬಾಗಲಕೋಟೆ 2, ಕೊಪ್ಪಳ ಮತ್ತು ರಾಮನಗರದಲ್ಲಿ ತಲಾ ಒಂದೊಂದು ಪ್ರಕರಣ ಬಂದಿದೆ.
ರಾಯಚೂರು, ಮಂಡ್ಯ, ಬೆಳಗಾವಿ, ದಾವಣಗೆರೆ, ವಿಜಯಪುರ, ಚಿಕ್ಕಾಬಳ್ಳಾಪುರ, ಮೈಸೂರು, ಉತ್ತರ ಕನ್ನಡ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಹಾವೇರಿ, ಚಿಕ್ಕಮಗಳೂರು, ಕೊಡಗಿನಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ಬಂದಿಲ್ಲ.
ಮೂರು ಮಂದಿ ಸಾವು:
ಬೆಂಗಳೂರಿನಲ್ಲಿ ಮೂರು ಮಂದಿ ಮೃತಪಟ್ಟಿದ್ದು ಒಟ್ಟು ಸಾವನ್ನಪ್ಪಿದವರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 67 ವರ್ಷದ ಪುರುಷ ಸೋಮವಾರ ಮೃತಪಟ್ಟಿದ್ದಾರೆ.
ಉಸಿರಾಟದ ತೊಂದರೆ, ಜ್ವರ, ನಿಶಕ್ತಿಯಿಂದ ಬಳಲುತ್ತಿದ್ದ ಬೆಂಗಳೂರು ನಗರದ 48 ವರ್ಷದ ಮಹಿಳೆ ಜೂನ್ 4 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಜೂನ್ 5 ರಂದು ಮೃತಪಟ್ಟಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 65 ವರ್ಷದ ಬೆಂಗಳೂರಿನ ಮಹಿಳೆ ಜೂನ್ 4 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 5 ರಂದು ಇನ್ನೊಂದು ಆಸ್ಪತ್ರೆಗೆ ಶಿಫ್ಟ್ ಆಗಿದ್ದು ಅಲ್ಲೇ ನಿಧನರಾಗಿದ್ದಾರೆ.
ಐಸಿಯುನಲ್ಲಿ ಎಷ್ಟು ಜನ?
ರಾಜ್ಯದಲ್ಲಿ ಒಟ್ಟು 14 ಮಂದಿ ಐಸಿಯುನಲ್ಲಿ ಇದ್ದಾರೆ. ಬೆಂಗಳೂರಿನಲ್ಲಿ 7, ಕಲಬುರಗಿ 4, ಧಾರವಾಡ, ತುಮಕೂರು, ಮಂಡ್ಯದಲ್ಲಿ ತಲಾ ಒಬ್ಬಬ್ಬ ರೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.