– ಬೆಂಗಳೂರಲ್ಲಿ 1,452, 31ಜನ ಸಾವು
– ಏಳು ಜಿಲ್ಲೆಗಳಲ್ಲಿ ನೂರರ ಗಡಿ ದಾಟಿದ ಸೋಂಕಿತರ ಸಂಖ್ಯೆ
ಬೆಂಗಳೂರು: ಕರ್ನಾಟಕದಲ್ಲಿ ಇಂದು 3,648 ಮಂದಿಗೆ ಸೋಂಕು ತಗುಲಿದ್ದು, 72 ಮಂದಿ ಮೃತಪಟ್ಟಿದ್ದಾರೆ. 730 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಇಂದು ಒಟ್ಟು 36,473 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಇಲ್ಲಿಯವರೆಗೆ ಒಟ್ಟು 10,57,303 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇನ್ನೂ 42,216 ಸಕ್ರಿಯ ಪ್ರಕಣಗಳಿದ್ದು, ಈ ವರೆಗೆ ಸಾವನ್ನಪ್ಪಿರುವವರ ಸಂಖ್ಯೆ 1,403ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈ ವರೆಗೆ 67,420 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 580 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ಬೆಂಗಳೂರಿನಲ್ಲಿ ಇಂದು 1,452 ಜನರಿಗೆ ಸೋಂಕು ತಗುಲಿದ್ದು, ಒಟ್ಟು 33,229 ಪ್ರಕರಣಗಳು ಪತ್ತೆಯಾದಂತಾಗಿದೆ. ಇದರಲ್ಲಿ ಇನ್ನೂ 25,574 ಸಕ್ರಿಯ ಪ್ರಕರಣಗಳಿವೆ. ಇಂದು 163 ಜನ ಮಾತ್ರ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಬಿಡುಗಡೆಯಾದವರ ಸಂಖ್ಯೆ 6956ಕ್ಕೆ ತಲುಪಿದೆ. 31ಜನ ಸಿಲಿಕಾನ್ ಸಿಟಿಯಲ್ಲಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಈ ವರೆಗೆ 698 ಜನ ಸಾವನ್ನಪ್ಪಿದಂತಾಗಿದೆ.
Advertisement
Advertisement
ಇಂದಿನ ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಂಗಳೂರು 1,452, ಬಳ್ಳಾರಿ 234, ಬೆಂಗಳೂರು ಗ್ರಾಮಾಂತರ 208, ಧಾರವಾಡ 200, ವಿಜಯಪುರ 160, ಮೈಸೂರು 149, ಕಲಬುರಗಿ 124, ಉಡುಪಿ 98, ದಕ್ಷಿಣ ಕನ್ನಡ 89, ಉತ್ತರ ಕನ್ನಡ 78 ಪ್ರಕರಣಗಳು ಪತ್ತೆಯಾಗಿವೆ.